BREAKING NEWS
Search

ಅಖಿಲ ಭಾರತ ಬ್ರಾಹ್ಮಣ ಸಂಘದ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಗೋಕರ್ಣದ ಕುಮಾರ್ ಭಟ್ ಆಯ್ಕೆ.

232

ಕಾರವಾರ:- ಅಖಿಲ ಭಾರತ ಬ್ರಾಹ್ಮಣ ಸಂಘದ ಉತ್ತರ ಕನ್ನಡ ಜಿಲ್ಲೆಯ ಅಧ್ಯಕ್ಷರಾಗಿ ಕುಮಟಾ ತಾಲೂಕಿನ ಗೋಕರ್ಣದ ಕುಮಾರ್ ಭಟ್ ರವರನ್ನು ಆಯ್ಕೆಮಾಡಲಾಗಿದೆ.

ಇಂದು ಬೆಂಗಳೂರಿನ ಗಿರಿನಗರದ ಅವಧಾನಿ ಕನ್ವೆಂನ್ಷನ್ ಸೆಂಟರ್ ನಲ್ಲಿ ನಡೆದ ಅಖಿಲ ಭಾರತ ಬ್ರಾಹ್ಮಣ ಸಂಘದ ಪಂಚರಾಜ್ಯ ಪ್ರತಿನಿಧಿಗಳ ಸಂವಾದ ಸಭೆ ಹಾಗೂ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಪದಾಧಿಕಾರಿಗಳ ಸಂವಾದ ಸಮಾರಂಭದಲ್ಲಿ ಈ ಆಯ್ಕೆಯನ್ನು ಘೋಷಿಸಲಾಯಿತು.

ವೈದಿಕ ಕುಟುಂಬದಲ್ಲಿ ಜನಿಸಿದ ಕುಮಾರ ಭಟ್ ರವರು ಧಾರ್ಮಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿದ್ದು ಕುಮಟಾ ದಲ್ಲಿ ಅಲ್ಲದೆ ಜಿಲ್ಲೆಯಾಧ್ಯಾಂತ ಉತ್ತಮ ಹೆಸರನ್ನು ಮಾಡಿದ್ದಾರೆ. ಇವರ ಕಾರ್ಯವನ್ನು ಪರಿಗಣಿಸಿ ಈ ಆಯ್ಕೆ ಮಾಡಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ