₹16,17,460 ಬೆಲೆಯ ಮಾದಕ ವಸ್ತುಗಳ ನಾಶ.

375

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 75 ಕೆಜಿ ಮಾದಕದ್ರವ್ಯ ವನ್ನು ಇಂದು ನಾಶ ಪಡಿಸಲಾಯಿತು.

ಅಂತರಾಷ್ಟ್ರೀಯ ಮಾದಕದ್ರವ್ಯ ಕಳ್ಳಸಾಗಣೆ ವಿರೋಧಿ ದಿನ ಹಿನ್ನಲೆ ಯಲ್ಲಿ ಈ ಕ್ರಮ ಕೈಗೊಳ್ಳಲಾಗದ್ದು ,ಒಟ್ಟೂ 69 ಪ್ರಕರಣಗಳಲ್ಲಿ ವಶಕ್ಕೆ ಪಡೆಯಲಾಗಿದ್ದ 75.119 ಕೆಜಿ ಗಾಂಜಾ, 195 ಗ್ರಾಂ ಚರಸ್, 61 ಗಾಂಜಾ ಗಿಡ ಸೇರಿ ಒಟ್ಟು 75.314 ಕೆಜಿಯ ₹16,17,460 ಲಕ್ಷ ಮೌಲ್ಯದ ಮಾದಕ ದ್ರವ್ಯವನ್ನು ಅಂಕೋಲಾ ತಾಲೂಕಿನ ಬೊಗ್ರಿಬೈಲ್‌ನಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ನಾಶಪಡಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿ ಸುಮನ್ ಪೆನ್ನೇಕರ್ ಇನ್ನುತರರು ಉಪಸ್ಥಿತರಿದ್ದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ