add

ಅಂಕೋಲ|ಭೀಕರ ರಸ್ತೆ ಅಪಘಾತ:ಮಹಿಳೆ ಸಾವು.

1846

ಕಾರವಾರ : ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವುಕಂಡು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಮಾಸ್ತಿಕಟ್ಟಾ ಬಳಿ ನಡೆದಿದೆ.

ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದು ಧಾರವಾಡ ಮೂಲದವರಾಗಿದ್ದಾರೆ.

ಅಂಕೋಲಾದಿಂದ ಹುಬ್ಬಳ್ಳಿಗೆ ಹೊರಟಿದ್ದ ಕಾರು,ಗದಗದಿಂದ ಹುಬ್ಬಳ್ಳಿ ಮಾರ್ಗವಾಗಿ ಕಾರವಾರಕ್ಕೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಘಟನೆ ನಡೆದಿದೆ.

ಗಾಯಾಳುಗಳು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದುಅಂಕೋಲಾ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ