add

Panther death

ಅಂಕೋಲ ಹೆದ್ದಾರಿಯಲ್ಲಿ ಅಪಘಾತ:ಚಿರುತೆ ಸಾವು.

513

ಅಂಕೊಲ :- ರಸ್ತೆ ದಾಟುತ್ತಿದ್ದಾಗ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸ್ಥಳದಲ್ಲೇ ಮೃತ ಪಟ್ಟ ಘಟನೆ ಅಂಕೋಲಾ ತಾಲೂಕಿನ ಮಾಸ್ತಿಕಟ್ಟಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಅಂಕೋಲಾ ತಾಲೂಕಿನ ಮಾಸ್ತಿಕಟ್ಟಾದ ಅರಣ್ಯ ಪ್ರದೇಶದಿಂದ ಹಾದು ಹೋಗಿರುವ ರಾಷ್ಟೀಯ ಹೆದ್ದಾರಿ 63 ರಲ್ಲಿ ಈ ಘಟನೆ ಸಂಭವಿಸಿದೆ.

ದಟ್ಟ ಅರಣ್ಯ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಮಾಸ್ತಿಕಟ್ಟಾ ವ್ಯಾಪ್ತಿಯಲ್ಲಿ ಚಿರತೆ ಸೇರಿದಂತೆ ಕಾಡು ಪ್ರಾಣಿಗಳ ಓಡಾಟ ಸಾಮಾನ್ಯವಾಗಿದೆ.

ಅದರಂತೆ ಮಾಸ್ತಿಕಟ್ಟಾದ ದೇವಸ್ಥಾನದ ಬಳಿ ಶುಕ್ರವಾರ ರಾತ್ರಿಯ ವೇಳೆಗೆ ಚಿರತೆಯೊಂದು ಹೆದ್ದಾರಿಯ ಒಂದು ಕಡೆಯಿಂದ ಇನ್ನೊಂದು ಕಡೆಗೆ ದಾಟಲು ಪ್ರಯತ್ನಿಸಿದ್ದು ಈ ವೇಳೆ ಹೆದ್ದಾರಿಯಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಚಿರತೆಗೆ ಗುದ್ದಿದೆ.

Ankola road accident Panther death Uttara Kannada wildlife

ಅಪಘಾತದಿಂದಾಗಿ ಚಿರತೆಯ ಸೊಂಟದ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದ್ದು ಸ್ಥಳದಲ್ಲೇ ಮೃತ ಪಟ್ಟಿದೆ.

ಘಟನೆಯ ಮಾಹಿತಿ ಪಡೆದ ಎಸಿಎಫ್ ಮಂಜುನಾಥ ನಾವಿ ಹಾಗೂ ಆರ್‌ಎಫ್‌ಓ ರಾಘವೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪಂಚನಾಮೆ ಕಾರ್ಯ ನಡೆಸಿದ್ದಾರೆ.

ಬಳಿಕ ಪಶು ವೈದ್ಯಾಧಿಕಾರಿ ಚಂದನ್ ಅವರು ಚಿರತೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದು ಅಪಘಾತದ ತೀವ್ರತೆಗೆ ಚಿರತೆಯ ದೇಹದೊಳಗೆ ರಕ್ತ ಸ್ರಾವವಾಗಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಅಂಕೋಲಾ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು ಚಿರತೆಯ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ