ಹೊನ್ನಾರದಲ್ಲಿ ರಸ್ತೆಗೆ ಗುಡ್ಡ ಕುಸಿತ!ಬೈಕ್ ಸವಾರ ಪ್ರಾಣಾಪಾಯದಿಂದ ಪಾರು!

1311

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣಕ್ಕಾಗಿ ತೆರವು ಮಾಡಿದ್ದ ಗುಡ್ಡದಿಂದ ಬೃಹತ್ ಕಲ್ಲುಬಂಡೆಯೊಂದು ರಸ್ತೆ ಮೇಲೆ ಉರುಳಿಬಿದ್ದು ರಸ್ತೆಯಲ್ಲಿ ಸಂಚರಿಸುತಿದ್ದ ಬೈಕ್ ಸವಾರನ ಮೇಲೆ ಬಿದ್ದ ಘಟನೆ‌ ಜಿಲ್ಲೆಯ ತಾಲೂಕಿನ ಹೊಸಪಟ್ಟಣ ಬಳಿ ನಡೆದಿದೆ.ಬೃಹತ್ ಬಂಡೆ ರಸ್ತೆ ಮೇಲೆ ಉರುಳಿ ಬಂದ ಪರಿಣಾಮ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಗಿರೀಶ್ ಬುಧವಂತ ನಾಯ್ಕ ಎನ್ನುವವ ಬೈಕ್ ಸಂಪೂರ್ಣ ಹಾನಿಯಾಗಿದೆ.

ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣಪುಟ್ಟ ಗಾಯಗಳಾಗಿದೆ.ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ ಕಾರ್ಯವನ್ನ ಐ.ಆರ್.ಬಿ ಕಂಪನಿ ಮಾಡಿದ್ದು ಕಳೆದ ಮಳೆಗಾಲದಲ್ಲೂ ಅವೈಜ್ಞಾನಿಕ ಕಾಮಗಾರಿಯಿಂದ ಅನೇಕ ಅವಘಡಗಳು ಹೆದ್ದಾರಿಯಲ್ಲಿ ಸಂಭವಿಸಿತ್ತು. ಈ ಬಾರಿ ಸಹ ಮಳೆಗಾಲ ಪ್ರಾರಂಭದಲ್ಲಿಯೇ ಅವಘಡ ಸಂಭವಿಸಿದ್ದು ಮಳೆಯಿಂದ ಗುಡ್ಡಗಳು ಕುಸಿಯತೊಡಗಿದ್ದು ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ