BREAKING NEWS
Search

ಅಡಿಕೆಗೆ ಬಂತು ಬಂಗಾರದ ಬೆಲೆ!ಕ್ವಿಂಟಲ್ ಗೆ 40ಸಾವಿರಕ್ಕೂ ಹೆಚ್ಚು ಜಿಗಿತ!ಕೃಷಿಕರ ಬಳಿ ಅಡಕೆ ಕೊರತೆ!

1819

ಕಾರವಾರ:- ಕಳೆದ ನಾಲ್ಕೈದು ವರ್ಷಗಳ ಅಡಕೆ ಇತಿಹಾಸದಲ್ಲಿ ಕೆಂಪಡಕೆ (ರಾಶಿ) ಕ್ವಿಂಟಾಲ್ ಒಂದಕ್ಕೆ ಗರಿಷ್ಟ 40 ಸಾವಿರ ರೂಪಾಯಿ ಗಡಿ ದಾಟಿದ್ದು, ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿನ ಕೃಷಿಕರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.

ಮೂರ್ನಾಲ್ಕು ತಿಂಗಳಿಂದ ನಿಧಾನವಾಗಿ ಏರುತ್ತಿದ್ದ ಕೆಂಪಡಕೆ ದರವು ಕಳೆದ ಗುರುವಾರದಂದು ಶಿರಸಿಯ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಒಂದಕ್ಕೆ 40169 ರೂ. ಗರಿಷ್ಟ ದರ ದಾಖಲಿಸಿ, ಕಳೆದ ನಾಲ್ಕೈದು ವರ್ಷಗಳಲ್ಲೇ ಉತ್ತಮ ದರವಾಗಿ ಗುರುತಿಸಿಕೊಂಡಿದೆ. ವಾರದಿಂದೀಚೆಗೆ 38-39 ಸಾವಿರದ ಆಸುಪಾಸಿದ್ದ ದರ ಈಗ 40ರ ಗಡಿ ದಾಟಿದ್ದು, ಹಂಗಾಮಿಗೆ ಸರಿಯಾಗಿ ಉತ್ತಮ ದರದ ನಿರೀಕ್ಷೆಯಲ್ಲಿದ್ದ ಅಡಕೆ ಬೆಳೆಗಾರರು ಇದರಿಂದ ಖುಷಿಯಾಗಿದ್ದಾರೆ.

2014-15ರಲ್ಲಿ ಕೆಂಪಡಕೆ ಕ್ವಿಂಟಾಲ್ ಒಂದಕ್ಕೆ 81 ಸಾವಿರ ರೂ. ಗಡಿ ದಾಟಿದ್ದು, 2018 ಹಾಗೂ 2019ರಲ್ಲಿ ಸರಾಸರಿ 32 ಸಾವಿರ ರೂ. ಕ್ವಿಂಟಾಲ್ ಒಂದಕ್ಕೆ ಗರಿಷ್ಟ ದರ ಲಭಿಸಿತ್ತು. ಇದೀಗ ಮತ್ತೆ ದರ ಏರಿಕೆಯಾಗಿದ್ದು, ಬೆಳೆಗಾರರು ಇನ್ನಷ್ಟು ದರ ಏರುವ ನಿರೀಕ್ಷೆಯಲ್ಲಿದ್ದಾರೆ. ಕೆಲ ವರ್ಷಗಳ ಹಿಂದೆ ಕ್ವಿಂಟಾಲ್ ಗೆ 80 ಸಾವಿರ ಕಂಡಿದ್ದ ಬೆಳೆಗಾರರು ಈಗ ಕನಿಷ್ಠ 50 ಸಾವಿರ ದಾಟಬಹುದು ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ.

ಬೆಳೆ ಕಡಿಮೆ ಅಡಿಕೆ ಇಲ್ಲ

ಕಳೆದ ವರ್ಷದ ಅಗಸ್ಟ ತಿಂಗಳಲ್ಲಿ ಸುರಿದ ಭಾರೀ ಮಳೆಗೆ ಶೇ.50 ರಷ್ಟು ಅಡಿಕೆ ಬೆಳೆ ಕಡಿಮೆಯಾಗಿತ್ತು. ಅದರ ಜೊತೆಗೆ ಕೊಳೆ ರೋಗವೂ ಬಾಧಿಸಿದ ಪರಿಣಾಮ ಕೆಲವು ಕಡೆಗಳಲ್ಲಿ ಶೆ.80 ರಷ್ಟು ಬೆಳೆ ನಾಶವಾಗಿದ್ದು, ಮಲೆನಾಡಿನ ತಾಲೂಕಿನಲ್ಲಿ ಈ ಬಾರಿ ಅಡಿಕೆ ಬೆಳೆ ಕುಂಠಿತವಾಗಿದೆ. ಇದರ ಪರಿಣಾಮ ಅಡಿಕೆ ದರ ಇನ್ನೂ ಏರುವ ನಿರೀಕ್ಷೆಯನ್ನು ವ್ಯಾಪಾರಸ್ಥರು ವ್ಯಕ್ತಪಡಿಸಿದ್ದು, ಕೃಷಿಕರಿಗೆ ಹೆಚ್ಚಿನ ಅನುಕೂಲ ಆಗುವ ಸಾಧ್ಯತೆಗಳಿದೆ ಎನ್ನಲಾಗಿದೆ.

ಯಲ್ಲಾಪುರದಲ್ಲಿ ಉತ್ತಮ ಬೆಲೆ

ಯಲ್ಲಾಪುರ ಮಾರುಕಟ್ಟೆ ಕೆಂಪಡಿಕೆಗೆ ಉತ್ತಮ ದರ ಲಭ್ಯವಾಗಿದೆ. ಶಿರಸಿ ಮಾರುಕಟ್ಟೆಗಿಂತ ಹೆಚ್ಚಿನ ದರದಲ್ಲಿ ವ್ಯಾಪಾರವಿರುವ ಯಲ್ಲಾಪುರದಲ್ಲಿ 43 ಸಾವಿರ ರೂ.ಗಳಿಗೂ ಅಧಿಕ ದರವನ್ನು ರೈತರು ಕಂಡಿದ್ದಾರೆ. ಯಲ್ಲಾಪುರದಲ್ಲಿಯೂ ಅತಿಯಾದ ಮಳೆಯಿಂದ ಬೇಡ್ತಿ ನದಿ ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿತ್ತು. ಈಗ ಉತ್ತಮ ದರ ಬಂದಿರುವುದರಿಂದ ಕೃಷಿಕರು ಉತ್ತಮ ಜೀವನ ನಡೆಸಲು ಸಾಧ್ಯವಾಗಲಿದೆ ಎಂದು ವಿಶ್ಲೇಷಿಸಲಾಗಿದೆ.ಆದರೇ ಕೊಳೆರೋಗ ದಿಂದ ಬರುವ ಇಳುವರಿಯಲ್ಲಿ ಬಾರಿ ಹೊಡೆತ ಕಂಡಿರುವ ಬೆಳಗಾರರು ಈ ಬಾರಿ ಅತೀ ಕಡಿಮೆ ಅಡಕೆ ಇಳುವರಿ ಪಡೆದಿದ್ದಾರೆ. ಹೀಗಾಗಿ ಆದ ನಷ್ಟ ವಾದ್ರು ಏರಿಕೆ ದರ ದಿಂದ ಸಿಗಬಹುದು ಎಂಬ ನಂಬಿಕೆಯಲ್ಲಿ ಬೆಳೆಗಾರರಿದ್ದಾರೆ.




Leave a Reply

Your email address will not be published. Required fields are marked *