ಕರೋನಾಕ್ಕೆ ಬಲಿಯಾದ ಭದ್ರಾವತಿ ಮಾಜಿ ಶಾಸಕ ಅಪ್ಪಾಜಿಗೌಡ!

575

ಶಿವಮೊಗ್ಗ :- ಭದ್ರಾವತಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಕರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.
ಕೋವಿಡ್ ಪರೀಕ್ಷೆಯಲ್ಲಿ ಅಪ್ಪಾಜಿಗೌಡ ಅವರಿಗೆ ಕರೋನ ಪಾಸಿಟಿವ್ ವರದಿಯಾಗಿದೆ.

ಅಪ್ಪಾಜಿಗೌಡ ಅವರಿಗೆ ರಾತ್ರಿ ಮನೆಯಲ್ಲಿದ್ದಾಗ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೆ ಅವರನ್ನು ಭದ್ರಾವತಿಯಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು,ನಂತರ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ವೇಳೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಾಜಿ ಶಾಸಕ ಅಪ್ಪಾಜಿಗೌಡ ಅವರಿಗೆ ಕರೋನ ಟೆಸ್ಟ್ ಮಾಡಲಾಗಿದೆ. ರಾಪಿಡ್ ಅಂಟಿಜೆನ್ ಟೆಸ್ಟ್ ನಲ್ಲಿ ಕರೋನ ಪಾಸಿಟಿವ್ ಬಂದಿದೆ ಎಂದು ತಿಳಿದು ಬಂದಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿ ಆಗದೆ ನಿಧನರಾಗಿದ್ದಾರೆ.

ಆಸ್ಪತ್ರೆ ಧಾವಿಸಿದ ಅಭಿಮಾನಿಗಳು

ಇನ್ನು ವಿಚಾರ ತಿಳಿಯುತ್ತಿದ್ದಂತೆ ಮೆಗ್ಗಾನ್ ಆಸ್ಪತ್ರೆ ಬಳಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು, ಬೆಂಬಲಿಗರು ದೌಡಾಯಿಸಿದ್ದಾರೆ.ಕೋವಿಡ್ ಹಿನ್ನೆಲೆ ಅಪ್ಪಾಜಿಗೌಡ ಅವರ ಪಾರ್ಥೀವ ಶರೀರ ದರ್ಶನಕ್ಕೆ ಅವಕಾಶ ಕಲ್ಪಿಸಲು ನಿರಾಕರಿಸಲಾಗಿದ್ದು ನಾಳೆ ಸಕಲ ವಿಧಿ ವಿಧಾನದ ಮೂಲಕ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ