add

ಪ್ರಾಣ ಪಣಕ್ಕಿಟ್ಟು ಸಂಕದಾಟುತಿದ್ದ ಶಾಲಾ ಮಕ್ಕಳಿಗೆ ಸಿಕ್ತು ಸೇತುವೆ ಸೌಭಾಗ್ಯ!ಸ್ಪೀಕರ್ ಕಾಗೇರಿ ಮಾಡದ ಕೆಲಸ ಮಾಡಿದ್ರು ಬೆಂಗಳೂರಿನ ರಾಜ್ಯಸಭಾ ಸದಸ್ಯ!

2277

ಕಾರವಾರ :- ಉತ್ತರ ಕನ್ನಡ ಜಿಲ್ಲೆ ಅಂದ್ರೆ ಗುಡ್ಡ ಬೆಟ್ಟ, ಹಳ್ಳಕೊಳ್ಳಗಳು ಸಮೃದ್ಧಿಯಾಗಿರು ನಾಡು ಬಹುತೇಕ ಪ್ರದೇಶಗಳು ಅರಣ್ಯ ಮಯವಾದ್ದರಿಂದ ಇಲ್ಲಿ ಒಂದಲ್ಲಾ ಒಂದು ಸಮಸ್ಯೆಗಳಿವೆ. ಆದ್ರೆ ಇದನ್ನು ಬಗೆಹರಿಸಬೇಕಾದ ಜನಪ್ರತಿನಿಧಿಗಳು ಮಾತ್ರ ತಮಗೆ ಸಂಬಂಧವಿಲ್ಲ ಎಂದು ಮೂಗು ತೂರುತ್ತಾ ಹೋಗುವುದು ಮತ ಹಾಕಿದ ಜನರ ದೌರ್ಭಾಗ್ಯ.

ಹೌದು ರಾಜ್ಯದ ಸ್ಪೀಕರ್ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸಂಸದ ಅನಂತಕುಮಾರ್ ಹೆಗಡೆಯವರ ಕ್ಷೇತ್ರವಾದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕವಂಚೂರು ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಬಸರಿಮನೆ ಗ್ರಾಮದಲ್ಲಿ ಸುಮಾರು 100 ಕ್ಕೂ ಹೆಚ್ಚು ಮನೆಗಳಿವೆ.

ಈ ಊರಿನ ಮಕ್ಕಳು ಶಾಲೆಗೆ ಹೋಗಬೇಕು ಅಂದ್ರೆ ನಾಲ್ಕು ಕಿಲೋಮೀಟರ್ ನಡೆದು ಹೋಗಬೇಕು. ಈ ಮಾರ್ಗದಲ್ಲಿ ಬಸರಿಮನೆ ಹೊಳೆ ಸಾಗುತ್ತದೆ. ಮಳೆಗಾಲದಲ್ಲಿ ಈ ಹೊಳೆ ತುಂಬಿ ಹರಿಯುವುದರಿಂದ ಅಡಿಕೆ ಹಾಗೂ ಮರದ ಹಲಗೆಯಲ್ಲಿ ನಿರ್ಮಿಸಿದ ಕಾಲು ಸಂಕವೇ ಶಾಲೆಗೆ ಹೋಗುವ ಮಕ್ಕಳಿಗೆ ಜೀವರಕ್ಷಕ.

ಮಳೆಗಾಲದಲ್ಲಿ ಈ ಮಕ್ಕಳು ಜೀವ ಕೈಯಲ್ಲಿ ಹಿಡಿದು ಸಾಗಬೇಕು. ಹೀಗಾಗಿ ಇಲ್ಲಿನ ಶಾಸಕರು, ಸದ್ಯ ರಾಜ್ಯದ ಸ್ಪೀಕರ್ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಹಾಗೂ ಸಂಸದ ಅನಂತಕುಮಾರ್ ಹೆಗಡೆಗೆ ಸೇತುವೆ ನಿರ್ಮಿಸುವಂತೆ ಮನವಿ ಮಾಡಿದ್ದರು.

2019 ರಲ್ಲಿ ಜಿಲ್ಲಾಪಂಚಾಯ್ತಿ ಅನುದಾನ ಬಿಡುಗಡೆಯಾಯಿತಾದರೂ ಸೇತುವೆ ಮಾತ್ರ ನಿರ್ಮಾಣವಾಗಲಿಲ್ಲ. ಹೀಗಾಗಿ ಸ್ಪೀಕರ್ ಕಾಗೇರಿಗೆ ಹಲವು ಬಾರಿ ಮನವಿ ನೀಡಿದ್ದರು. ಆದರೇ ಕೆಲಸ ಮಾತ್ರ ಪ್ರಾರಂಭ ಆಗಲೇ ಇಲ್ಲ.
ಹೀಗಾಗಿ ಅಂದಿನ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ನಿವೇದಿತ್ ಆಳ್ವ ರವರ ಗಮನಕ್ಕೆ ತಂದಿದ್ದರು.

ಇನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಕೆಲವು ಅಡೆತಡೆಗಳು ಬಂದಿದ್ದರಿಂದ ಸೇತುವೆ ನಿರ್ಮಿಸಲು ಸಾಧ್ಯವಾಗಲಿಲ್ಲ .ಹಾಗಂತ ಅವರು ಸುನ್ಮನೆ ಕೂರದೇ ತಮ್ಮ ಸ್ನೇಹಿತರಾಗಿದ್ದ ಬೆಂಗಳೂರಿನ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಕರ್ ರವರ ಗಮನಕ್ಕೆ ತಂದು ಸಹಾಯ ಬೇಡಿದ್ದರು. ಕುದ್ದು ಸ್ಥಳಕ್ಕೆ ಬಂದು ಸಮಸ್ಯೆ ಅರಿತ ಅವರು ತಮ್ಮ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಹತ್ತು ಲಕ್ಷ ರುಪಾಯಿ ಹಣವನ್ನು ಮಂಜೂರು ಮಾಡಿ ಉ.ಕ. ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು‌.

ನಿವೇದಿತ್ ಆಳ್ವ ಸಹ ಈಬಗ್ಗೆ ಮುತುವರ್ಜಿ ವಹಿಸಿ ಸೇತುವೆ ನಿರ್ಮಾಣ ಆಗುವ ವರೆಗೆ ಪ್ರತಿ ಭಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತಿದ್ದರು. ಇದರ ಪ್ರತಿಫಲವಾಗಿ ಇಂದು ಸೇತುವೆ ನಿರ್ಮಾಣವಾಗಿದ್ದು ಜನ ಕೃತಜ್ಞತೆ ಸಲ್ಲಿಸಿದ್ದಾರೆ.
ಇನ್ನು ಪ್ರತಿ ವರ್ಷ ಮಳೆಗಾಲದಲ್ಲಿ ಜೀವ ಕೈಯಲ್ಲಿ ಹಿಡಿದು ಭಯದಲ್ಲೇ ಸಾಗುತಿದ್ದ ಮಕ್ಕಳಿಗೆ ಈಭಾರಿಯಿಂದ ಮಳೆಗಾಲ ಭಯದ ರಿಲೀಪ್ ನೀಡಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ