ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ‌ ಕರೊನಾ ಪಾಸಿಟಿವ್

223

ಬೀದರ್ :- ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ ಕರೊನಾ ಸೋಂಕು ತಗುಲಿದೆ.

ಕಳೆದ ಮೂರು ತಿಂಗಳಿಂದ ರಾಮಚಂದ್ರನ್ ಅವರು ಜಿಲ್ಲೆಯಲ್ಲಿ ಕರೊನಾ ಸೋಂಕು ನಿಯಂತ್ರಣ, ಸೋಂಕಿತರಿಗೆ ಉತ್ತಮ ಚಿಕಿತ್ಸೆ ಸಿಗುವುದು ಸೇರಿದಂತೆ ಈ ವಿಪತ್ತಿನ ಪರಿಸ್ಥಿತಿಯ ನಿರ್ವಹಣಾ ಕಾರ್ಯ ಅತ್ಯಂತ ಶೃದ್ಧೆ, ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಮಾಡುತ್ತಿದ್ದಾರೆ. ಇದರೊಟ್ಟಿಗೆ ಆಡಳಿತದ ಎಲ್ಲ ಕೆಲಸ, ಕಾರ್ಯಗಳನ್ನು ಸಹ ಜನಹಿತದಿಂದ ಸುಗಮವಾಗಿ ನಡೆಸಲು ಅವಿರತ ಪ್ರಯತ್ನಿಸುತ್ತಿದ್ದಾರೆ.

ಕರ್ತವ್ಯದ ಸಂದರ್ಭದಲ್ಲಿ ಯಾರದೋ ಸಂಪರ್ಕದಿಂದ ಇವರಿಗೆ ಸೋಂಕು ಅಂಟಿದೆ‌. ಇವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ.‌ ಬ್ರಿಮ್ಸ್ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ವರದಿ:- ಪ್ರದೀಪ್ ಜಿ.ಎಸ್.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ