ಸಂಬಳ ಕೇಳಿದ ಗ್ರಾಮಸಹಾಯಕಿ-ಮಂಚಕ್ಕೆ ಕರೆದ ತಹಶೀಲ್ದಾರ್ ಸೇವೆಯಿಂದ ಬಿಡುಗಡೆ

1512

ಶಿವಮೊಗ್ಗ :- ಬಾಕಿಯಿದ್ದ ಸಂಬಳ ಬಿಡುಗಡೆ ಮಾಡುವಂತೆ ತಹಶೀಲ್ದಾರೆ ಗೆ ಗ್ರಾಮಸಹಾಯಕಿ ಮನವಿ ಮಾಡಿದರೆ ಮಂಚಕ್ಕೆ ಬರುವಂತೆ ಕರೆದು ದಲಿತ ಮಹಿಳೆಗೆ ಲೈಂಗಿಕ ದೌರ್ಜನ್ಯ ನೆಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಯಲ್ಲಿ ನಡೆದಿದೆ.

ಭದ್ರಾವತಿಯ ತಹಶೀಲ್ದಾರ್ ಎಚ್.ಸಿ.ಶಿವಕುಮಾರ್ ವಿರುದ್ಧ ಈ ಆರೋಪ ಕೇಳಿಬಂದಿದ್ದು ದೂರು ದಾಖಲಾದ ಹಿನ್ನಲೆಯಲ್ಲಿ ತಹಶೀಲ್ದಾರ್ ಅನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದ್ದು ಭದ್ರಾವತಿ ಹಳೆ ನಗರದಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಏನು?

ಭದ್ರಾವತಿಯ ಸಿದ್ದಾಪುರ ಗ್ರಾಮ ಸಹಾಯಕಿಯಾಗಿ‌ ಕೆಲಸ‌ ನಿರ್ವಹಿಸುತ್ತಿದ್ದ ಮಹಿಳೆ ಸಂಬಳ ನೀಡುವಂತೆ ತಹಶೀಲ್ದಾರ್​ ಬಳಿ ಮನವಿ ಮಾಡಿಕೊಂಡಿದ್ದಾಳೆ. ಈ ವೇಳೆ ತನ್ನೊಂದಿಗೆ ಸಹಕರಿಸಿದರೆ ಮಾತ್ರ ಸಂಬಳ ನೀಡುವುದಾಗಿ ತಹಶೀಲ್ದಾರ್ ತಿಳಿಸಿದ್ದಾರೆ ಎಂದು ಸಂತ್ರಸ್ತ ನೊಂದ ಮಹಿಳೆ ದೂರಿನಲ್ಲಿ ಉಲ್ಲೇಕಿಸಿದ್ದಾರೆ.

ಸಂತ್ರಸ್ತ ಮಹಿಳೆ ಪತಿ ಕೂಡ ಇದೇ ಗ್ರಾಮದಲ್ಲಿ ಗ್ರಾಮ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಅನಾರೋಗ್ಯದ ಕಾರಣ ಸಂತ್ರಸ್ತೆಯ ಅಕ್ಕ ಆರಂಭದಲ್ಲಿ ಐದಾರು ತಿಂಗಳು ಕೆಲಸ ಮಾಡಿದರು. ಇದಾದ ಬಳಿಕ ಚೇತರಿಸಿಕೊಂಡ ಸಂತ್ರಸ್ತೆಯ ಗಂಡ ಪುನಃ ಕೆಲಸಕ್ಕೆ ಮರಳಿದ್ದರು.

ಆದರೆ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಕಾರಣ ಕಳೆದ ಐದು ತಿಂಗಳಿನಿಂದ ಸಂತ್ರಸ್ತ ಮಹಿಳೆ ಕೆಲಸ ಮಾಡುತ್ತಿದ್ದರು. ಈ ವೇಳೆ ನೊಂದ ಮಹಿಳೆಗೆ ಐದಾರು ತಿಂಗಳಿನಿಂದ ವೇತನ ಬಂದಿರಲಿಲ್ಲ. ಈ ಬಗ್ಗೆ ತಹಶೀಲ್ದಾರ್ ಅವರ ಬಳಿ ಮಹಿಳೆ ವೇತನ‌ ಬಿಡುಗಡೆ ಮಾಡುವಂತೆ ಮನವಿ‌ ಮಾಡಿದ್ದಾಳೆ.

ಆದರೆ ತಹಶೀಲ್ದಾರ್ ನನ್ನ ಜೊತೆ ಸಹಕರಿಸಿದರೆ, ನಾನು ಹೇಳಿದ ಸ್ಥಳಕ್ಕೆ ಬಂದರೆ ವೇತನ ಬಿಡುಗಡೆ ಮಾಡುವುದಾಗಿ ಹೇಳಿದ್ದು ಈ ಕುರಿತು ಸಂತ್ರಸ್ತ ಮಹಿಳೆ ಆರೋಪಿಸಿದ್ದು, ಈ ಬಗ್ಗೆ ತಹಶೀಲ್ದಾರ್ ವಿರುದ್ದ ಹಳೆನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ತಹಶೀಲ್ದಾರ್​​ ಶಿವಕುಮಾರ್ ವಿರುದ್ದ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದರಿಂದ ಜಿಲ್ಲಾಧಿಕಾರಿ‌ ಕೆ.ಬಿ. ಶಿವಕುಮಾರ್ ಅವರು ತಹಶೀಲ್ದಾರ್ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ