ಕರೋನಾ ಸೊಂಕಿನ ಭಯ- ಚಿಕಿತ್ಸೆ ನೀಡದೇ ಸರ್ಕಾರಿ ಹಾಗೂ ಖಾಸಗಿ ವೈದರ ನಿರ್ಲಕ್ಷದಿಂದ ವ್ಯಕ್ತಿ ಸಾವು

1640

ಕಾರವಾರ:- ಹೃದಯಾಘಾತವಾದ ವ್ಯಕ್ತಿಗೆ ಕರೋನಾ ಸೋಂಕಿನ ಭಯದಿಂದ ಚಿಕಿತ್ಸೆ ನೀಡಲು ನಿರಾಕರಿಸಿ ವೈದ್ಯರ ಅಮಾನವೀಯತೆಯಿಂದ ವ್ಯಕ್ತಿ ದಾರುಣ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ನಡೆದಿದೆ.

ರಾಜಸ್ಥಾನ ಮೂಲದ ಮುರುಡೇಶ್ವರ ನಿವಾಸಿ ಹುಕ್ಮಾರಾಮ್ ಬೊರಾನ (65) ವೈದ್ಯರ ನಿರ್ಲಕ್ಷದಿಂದ ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಎರಡು ತಾಸು ಓಡಾಡಿದ್ರು ಸಿಗಲಿಲ್ಲ ಚಿಕಿತ್ಸೆ

ಮೂಲತಃ ರಾಜಸ್ಥಾನದ ಪ್ರಸ್ತುತ ಮುರ್ಡೇಶ್ವರದಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದ ಉಕ್ಮಾರಾಮ್ ಬೋರಾನ್ (65) ಇವರು ಕಳೆದ 35 ವರ್ಷಗಳಿಂದ ಮುರ್ಡೇಶ್ವರದಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದರು. ಇವರು ಸೋಮವಾರ ಮುಂಜಾನೆ ಎದೆನೋವಿನಿಂದ ಅಸ್ವಸ್ಥಗೊಂಡ ಖಾಸಗಿ ಕ್ಲಿನಿಕ್‍ಗೆ ತೆರಳಿದ್ದರು. ಅಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮರಳುವಾಗ ಮೂರ್ಚೆ ಹೋಗಿದ್ದಾರೆ.

ನಂತರ ಕೂಡಲೆ ಅಲ್ಲಿನ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಅಲ್ಲಿನ ವೈದ್ಯ ಪ್ರೀಯಾ ಗೋನ್ಸಾಲಿಸ್ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಅಲ್ಲದೆ ಚಿಕಿತ್ಸೆ ಕೊಡಲು ನಿರಾಕರಿಸಿ ಇಲ್ಲಿಂದ ತೆಗೆದುಕೊಂಡು ಹೋಗಿ ಇಲ್ಲವಾದರೆ ಪೊಲೀಸ್ ಠಾಣೆಗೆ ದೂರು ನೀಡುವೆ ಎಂದು ಬೆದರಿಸಿದ್ದಾರೆ.

ನಂತರ ಕುಟುಂಬಸ್ತರು ಮುರ್ಡೇಶ್ವರದ ಆರ್.ಎನ್.ಎಸ್. ಖಾಸಾಗಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿಯೂ ಚಿಕಿತ್ಸೆ ದೊರಕದೆ ಸುಮಾರು ಎರಡು ಘಂಟೆ ಅಲೆದಾಡಿದ ಅವರು ನಂತರ ಸ್ಥಳೀಯ ಕ್ಲಿನಿಕ್ ವೈದ್ಯರು ಪರೀಶೀಲನೆ ನಡೆಸಿ, ರೋಗಿ ಉಸಿರಾಡುತ್ತಿದ್ದು ಕೂಡಲೆ ತಾಲೂಕಾಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಆಸ್ಪತ್ರೆಗೆ ಬರುವಾಗ ಮಾರ್ಗ ಮದ್ಯದಲ್ಲಿ ರೋಗಿ ಮೃತಪಟ್ಟಿದ್ದಾರೆ.

ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದ ಕಾರಣ ತಮ್ಮ ತಂದೆಯನ್ನು ಕಳೆದುಕೊಳ್ಳುವಂತಾಯಿತು ಎಂದು ಮೃತ ವ್ಯಕ್ತಿಯ ಮಗ ರಿತೇಶ್ ರವರು ದೂರಿದ್ದಾರೆ.
ಇನ್ನು ವೈದ್ಯರ ನಿರ್ಲಕ್ಷಕ್ಕೆ ಮುರ್ಡೇಶ್ವರದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ವೈದ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು ಸರ್ಕಾರಿ ಹಾಗೂ ಖಾಸಗಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ