ಬೀದರ್ -ಬಸವಕಲ್ಯಾಣ ಶಾಸಕ ವಿಧಿವಶ!

437

ಬೆಂಗಳೂರು: ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ಅವರು ಇಂದು ಸಂಜೆ ನಿಧನರಾಗಿದ್ದಾರೆ.

ಕೋವಿಡ್-19 ಪಾಸಿಟಿವ್ ಹಿನ್ನೆಲೆಯಲ್ಲಿ ನಾರಾಯಣ ರಾವ್ ಅವರು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಬುಧವಾರದಿಂದ ನಾರಾಯಣರಾವ್ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು.ಹೀಗಾಗಿ ಕೃತಕ ಉಸಿರಾಟದ ವ್ಯವಸ್ಥೆ ಸಹ ಮಾಡಲಾಗಿತ್ತು.

ಆದರೇ ಯಾವುದೇ ಚಿಕಿತ್ಸೆಗೆ ಸ್ಪಂದಿಸದ 65 ವರ್ಷದ ನಾರಾಯಣ ರಾವ್ ಅವರು ಬಹುಅಂಗಾಂಗ ವೈಫಲ್ಯದಿಂದ ಇಂದು ಸಂಜೆ 3.55ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.

ಬಿ. ನಾರಾಯಣರಾವ್ ರವರ ಸಾಧನೆ ಹಾದಿ :-

1982 ಮೊದಲ ಬಾರಿಗೆ ಮಾಳೆಗಾಂವ್ ಜಿಲ್ಲಾ ಪಂಚಾಯತ ಕ್ಷೇತ್ರಕ್ಕ ಆಯ್ಕೆಯಾಗಿದ್ದ ಇವರು
ಮೊದಲು ಜನತಾ ಪಾರ್ಟಿಯಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು.ನಂತರ ಕಾಂಗ್ರೆಸ್ ಸೆರ್ಪಡೆಯಾಗಿದ್ದರು.

ಎಸ್ ಎಂ ಕೃಷ್ಣ ಸರ್ಕಾರದಲ್ಲಿ 2 ವರ್ಷ ಸಾಕ್ಷರತಾ ಮಿಷನ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
2013ರಲ್ಲಿ ಬಸವಕಲ್ಯಾಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಂತ್ತು ಸೋಲು ಅನುಭವಿಸಿದ್ದರು.

2018ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು

ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್,ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡ್ರು ಸೇರಿದಂತೆ ಹಲವು ರಾಜಕಾರಣಿಗಳ ಜೊತೆ ಗುರುತಿಸಿಕೊಂಡಿದ್ದ ಇವರು ದಲಿತರ ನಾಯಕ ಎಂದೇ ಬಿಂಬಿತರಾಗಿದ್ದರು.

ಕೋಳಿ ಸಮಾಜದಲ್ಲಿ ಹುಟ್ಟಿದ ಬಿ ನಾರಾಯಣರಾವ್ ಬಿಎ ಪದವಿ ಪಡೆದಿದ್ದರು.
ಮರಾಠಿ,ಹಿಂದೆ,ಇಂಗ್ಲಿಷ್, ತೆಲುಗು ಕನ್ನಡ ಭಾಷೆಗಳಲ್ಲಿ ಹಿಡಿತ ಸಾಧಿಸಿದ್ದ ಇವರು
ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರಲ್ಲಿ ಅರಣ್ಯ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರಾಗಿ ಸಹ ಸೇವೆ ಸಲ್ಲಿಸಿದ್ದರು.

ವರದಿ:- ಪ್ರದೀಪ್ ಜಿ.ಎಸ್ .




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ