ಬೀದರ್- ಶಾಸಕ ಬಿ.ನಾರಾಯಣರಾವ್ ಆರೋಗ್ಯ ಸ್ಥಿತಿ ಚಿಂತಾಜನಕ.

298

ಬೀದರ್: ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ (65) ಅವರ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ.

ಕರೊನಾದಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿರುವ ಶಾಸಕರು, ಕಳೆದ ರಾತ್ರಿಯಿಂದ ದಿಢೀರ್ ಆರೋಗ್ಯ ಹದಗೆಟ್ಟ ಪರಿಣಾಮ ಮತ್ತೆ ಕೃತಕ ಉಸಿರಾಟ (ವೆಂಟಿಲೇಟರ್) ವ್ಯವಸ್ಥೆ ಮಾಡಲಾಗಿದೆ. ಚಿಕಿತ್ಸೆಗೂ ಸೂಕ್ತವಾಗಿ ಸ್ಪಂದಿಸದ ಕಾರಣ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಶಾಸಕ ನಾರಾಯಣರಾವ್ ಅವರಿಗೆ ಕಳೆದ ದಿ.31ರಂದು ಕರೊನಾ ಸೋಂಕು ತಗುಲಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಸೆ.1ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶಕ್ಕೆ ಸೋಂಕು (ಲಂಗ್ಸ್ ಇನ್ಫೆಕ್ಶನ್), ನ್ಯೂಮೋನಿಯಾ, ಅಧಿಕ ರಕ್ತದೊತ್ತಡ ಹಾಗೂ ಶುಗರ್ ನಿಂದಾಗಿ ಆರಂಭದಲ್ಲಿಯೇ ಅವರ ಆರೋಗ್ಯ ಬಿಗಡಾಯಿಸಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾದ ಎರಡನೇ ದಿನದಂದೇ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿತ್ತು.

ಎರಡು ವಾರದ ಬಳಿಕ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿತ್ತು. ವೆಂಟಿಲೇಟರ್ ಸಹ ತೆಗೆಯಲಾಗಿತ್ತು. ಸೋಂಕಿನಿಂದ ಗುಣಮುಖರಾಗಿ ಬೇಗ ಹೊರಬರಲಿದ್ದಾರೆ ಎಂಬ ವಿಶ್ವಾಸ ಮೂಡಿತ್ತು. ಆದರೆ ಅಚಾನಕ್ ಸ್ಥಿತಿ ಬಿಗಡಾಯಿಸಿದೆ. ಮತ್ತೆ ಅವರನ್ನು ವೆಂಟಿಲೇಟರ್ ವ್ಯವಸ್ಥೆ ಮಾಡಿದ್ದು, ಏನೂ ಹೇಳದ ಸ್ಥಿತಿಯಲ್ಲಿದ್ದಾರೆ.

ಶ್ವಾಸಕೋಶಕ್ಕೆ ಸೋಂಕು (ಲಂಗ್ಸ್ ಇನ್ಫೆಕ್ಶನ್), ನ್ಯೂಮೋನಿಯಾ, ಅಧಿಕ ರಕ್ತದೊತ್ತಡ ಹಾಗೂ ಶುಗರ್ ನಿಂದಾಗಿ ಆರಂಭದಲ್ಲಿಯೇ ಅವರ ಆರೋಗ್ಯ ಬಿಗಡಾಯಿಸಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾದ ಎರಡನೇ ದಿನದಂದೇ ಅವರಿಗೆ ಕೃತಕ ಉಸಿರಾಟ ( ವೆಂಟಿಲೇಟೆರ್) ವ್ಯವಸ್ಥೆ ಮಾಡಲಾಗಿತ್ತು.

ಎರಡು ವಾರದ ಬಳಿಕ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿತ್ತು. ವೆಂಟಿಲೇಟರ್ ಸಹ ತೆಗೆಯಲಾಗಿತ್ತು. ಸೋಂಕಿನಿಂದ ಗುಣಮುಖರಾಗಿ ಬೇಗ ಹೊರಬರಲಿದ್ದಾರೆ ಎಂಬ ವಿಶ್ವಾಸ ಮೂಡಿತ್ತು. ಆದರೆ ಅಚಾನಕ್ ಸ್ಥಿತಿ ಬಿಗಡಾಯಿಸಿದೆ. ಮತ್ತೆ ಅವರನ್ನು ವೆಂಟಿಲೇಟರ್ ವ್ಯವಸ್ಥೆ ಮಾಡಿದ್ದು, ಏನೂ ಹೇಳದ ಸ್ಥಿತಿಯಲ್ಲಿದ್ದಾರೆ.

ವರದಿ:- ಪ್ರದೀಪ್ ಜಿ.ಎಸ್
Leave a Reply

Your email address will not be published. Required fields are marked *