BREAKING NEWS
Search

ಬೀದರ್ ನಲ್ಲು 145 ಕೆಜಿ ಗಾಂಜಾ ಬೆಳೆ ವಶ- ಬಂಧನ

160

ಬೀದರ್ :- ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಪೊಲೀಸರು 145 ಕೆ.ಜಿ ಗಾಂಜಾ ಬೆಳೆ ಜಪ್ತಿ ಮಾಡಿಕೊಂಡಿದ್ದಾರೆ.

ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದ ಮಾಣಿಕ ಗುಂಡಪ್ಪ ಜ್ಯಾಂತೆ ಎಂಬಾತ ತನ್ನ ಗದ್ದೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆ ಬೆಳೆದಿದ್ದಾನೆ.

ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಅಂದಾಜು 5 ರಿಂದ 8 ಅಡಿ ಉದ್ದ ಬೆಳೆದಿದ್ದ 145 ಕೆ.ಜಿ ಗಾಂಜಾ ಬೆಳೆಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಎಸ್ಪಿ ನಾಗೇಶ್ ಡಿ.ಲ್, ಎಎಸ್ಪಿ ಗೋಪಾಲ ಬ್ಯಾಕೋಡ ಡಿವೈಎಸ್ಪಿ ದೇವರಾಜ್ ಡಿ ಅವರ ಮಾರ್ಗದರ್ಶನದಲ್ಲಿ ಸಿಪಿಐ ಮಲ್ಲಿಕಾರ್ಜುನ ಯಾತನೂರ್, ಪಿಎಸ್ ಐ ಮಹಾಂತೇಶ ಲಂಬಿ ನೇತೃತ್ವದಲ್ಲಿ ಪೊಲೀಸರ ತಂಡ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರ ಸಮ್ಮುಖದಲ್ಲಿ ದಾಳಿ ನಡೆಸಿ ಅಕ್ರಮ ದಂಧೆ ಬಯಲು ಮಾಡಿದ್ದು ಆರೋಪಿಯನ್ನು ಬಂಧನ ಮಾಡಿದ್ದಾರೆ.

ಈ ಕುರಿತು ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ:- ಪ್ರದೀಪ್ .ಜಿ.ಎಸ್.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ