BREAKING NEWS
Search

ವಿಧಾನಪರಿಷತ್ತಿನ ಚುನಾನಾವಣೆಗೆ ರಾಜ್ಯ ಘಟಕದಿಂದ ಹೆಸರು ಸೂಚಿಸಲಾಗಿದೆ- ಅರವಿಂದ್ ಲಿಂಬಾವಳಿ

228

ಬೆಂಗಳೂರು :- ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ರಾಜ್ಯ ಘಟಕದವತಿಯಿಂದ ಹಲವು ಹೆಸರುಗಳನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲು ತೀರ್ಮಾನಿಸಲಾಗಿದೆ . ಅಂತಿಮವಾಗಿ ಕೇಂದ್ರ ಚುನಾವಣಾ ಸಮಿತಿಯು ಅಭ್ಯರ್ಥಿಗಳ ಹೆಸರನ್ನು ಘೋಷಿಸಲಿದೆ. ಎಂದು ಇಂದು ನಡೆದ ಬಿಜೆಪಿ ಕೋರ್ ಕಮಿಟಿಯ ಸಭೆಯ ವಿವರಗಳನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿಯವರು ಮಾಧ್ಯಮವನ್ನುದ್ದೇಶಿಸಿ ಮಾತನಾಡಿದರು.

ಕೋರ್ ಕಮಿಟಿ ಸಭೆಯ ವಿವರಗಳನ್ನು ಮಾಧ್ಯಮಗಳಿಗೆ ನೀಡಿ ಮಾತನಾಡಿದ ಅವರು, ಜೂನ್ 14ರಂದು ನಡೆದ ಕರ್ನಾಟಕ ಜನಸಂವಾದ ವಚ್ರ್ಯುವಲ್ ರ್ಯಾಲಿಯಲ್ಲಿ ವಿಶ್ವದ ಎಲ್ಲೆಡೆಯಿಂದ ಸುಮಾರು 2 ಕೋಟಿಗೂ ಅಧಿಕ ಜನ ಭಾಗವಹಿಸಿದ್ದರು. ರಾಜ್ಯದಲ್ಲಿ ಅಂದಾಜು 58.23 ಲಕ್ಷಕ್ಕೂ ಹೆಚ್ಚು ಜನ ವಚ್ರ್ಯುವಲ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

(ಫೇಸ್‍ಬುಕ್‍ನಲ್ಲಿ 50.50 ಲಕ್ಷ, ಟ್ವಿಟ್ಟರ್‍ನಲ್ಲಿ 21 ಲಕ್ಷ, ದೂರದರ್ಶನದಲ್ಲಿ 7 ಲಕ್ಷ ಜನ ವೀಕ್ಷಣೆ ಮಾಡಿದ್ದಾರೆ.) ಇದೇ ರೀತಿ ಮುಂದಿನ ದಿನದಲ್ಲಿ ಜಿಲ್ಲಾ ಮಟ್ಟದಲ್ಲಿಯೂ ವಚ್ರ್ಯುವಲ್ ರ್ಯಾಲಿಗಳನ್ನು ಆಯೋಜಿಸಿ ಜನರನ್ನು ತಲುಪುವ ತೀರ್ಮಾನವನ್ನು ಪಕ್ಷ ತೆಗೆದುಕೊಂಡಿದೆ.

ಹೋಬಳಿ ಮಟ್ಟದಲ್ಲಿ ಪಕ್ಷದ ಪದಾಧಿಕಾರಿಗಳು ಮನೆ ಮನೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯಶಸ್ವಿ ಯೋಜನೆಗಳ ಮಾಹಿತಿಯನ್ನೊಳಗೊಂಡಿರುವ ಕರಪತ್ರ ವಿತರಣೆ ಮಾಡಲಿದ್ದಾರೆ ಎಂದು ಅವರು ಹೇಳಿದರು.

ಮುಂದಿನ ಗುರುವಾರ (ಜೂನ್ 18ರಂದು) ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕೊರೋನಾ ವಿರುದ್ಧ ಜನಜಾಗೃತಿ ಜಾಥಾ ಆಯೋಜಿಸಲಾಗಿದೆ. ಜನರಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಹಾಗೂ ಮುಖ ಕವಚ ಬಳಕೆಯ ಕುರಿತು ಅರಿವು ಮೂಡಿಸಲು ಪಕ್ಷ ತೀರ್ಮಾನಿಸಿದೆ.

ಈ ಹಿನ್ನೆಲೆಯಲ್ಲಿ ಪ್ರತಿ ಸಭೆಯಲ್ಲಿ 50 ಜನರಿಗಿಂತ ಹೆಚ್ಚು ಸೇರದಂತೆ ಎಲ್ಲರೂ ಎಚ್ಚರ ವಹಿಸಬೇಕಾಗಿದೆ. ಬೆಂಗಳೂರಿನಲ್ಲಿ ಜನಜಾಗೃತಿ ನಡಿಗೆ ಆಯೋಜಿಸಲಾಗಿದ್ದು ಇದರಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರು ಭಾಗವಹಿಸಲಿದ್ದಾರೆ.

ಉಳಿದ ಕಡೆಗಳಲ್ಲಿ ಎಲ್ಲಾ ಜನಪ್ರತಿನಿಧಿಗಳು, ಪದಾಧಿಕಾರಿಗಳು ಭಾಗವಹಿಸಬೇಕೆಂದು ತಿಳಿಸಲಾಗಿದೆ ಎಂದು ತಿಳಿಸಿದರು.

ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ಪಕ್ಷದ ಪ್ರತಿ ಘಟಕದಲ್ಲೂ 20 ಜನರಿಗಿಂತ ಹೆಚ್ಚು ಸೇರದಂತೆ ಯೋಗಾಸನ ನಡೆಸಿ ಸಾಂಕೇತಿಕವಾಗಿ ಯೋಗ ದಿನ ಆಚರಿಸಬೇಕೆಂದು ತೀರ್ಮಾನಿಸಲಾಗಿದೆ.

ಉಳಿದಂತೆ ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಯೋಗಾಸನ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡುವಂತೆ ಕೋರ್ ಕಮಿಟಿ ತೀರ್ಮಾನಿಸಿದೆ ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರವು ಕಿಸಾನ್ ಸಮ್ಮಾನ್ ಯೋಜನೆಯ 2ನೇ ಕಂತಿನಲ್ಲಿ 1 ಸಾವಿರ ಕೋಟಿ ರೂ.ವನ್ನು ಇಂದು ಬಿಡುಗಡೆ ಮಾಡಿದೆ. ಆದ್ದರಿಂದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವ ತೀರ್ಮಾನವನ್ನು ಕೋರ್ ಕಮಿಟಿ ಸಭೆಯಲ್ಲಿ ತೆಗೆದುಕೊಂಡಿದ್ದೇವೆ ಎಂದರು.




Leave a Reply

Your email address will not be published. Required fields are marked *