BREAKING NEWS
Search

ಬಿಜೆಪಿಯವರು ಹೆಣದ ಮೇಲೆ ಹಣ ಮಾಡುವವರು- ಬಿ.ಕೆ ಹರಿಪ್ರಸಾದ್

478

ಕರೋನಾ ದಲ್ಲಿ ಬಿಜೆಪಿ ಬ್ರಷ್ಟಾಚಾರ ಮಾಡುತ್ತಿದೆ.
ಬಿಜೆಪಿಯವರು ಹೆಣದ ಮೇಲೆ ಹಣ ಮಾಡುವವರು, ಶವದ ಮೇಲೆ ಕುಳಿತು ಊಟ ಮಾಡುವವರು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಕಿಡಿಕಾರಿದ್ದಾರೆ.

ಕಾರವಾರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗರಿಗೆ ಯಾವುದೇ ನಾಚಿಕೆ, ಮಾನಮರ್ಯಾದೆ ಇಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜ್ಯ ಸರ್ಕಾರ ಇಂಥ ಕೊರೋನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲೂ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಇದು ಕಾಂಗ್ರೆಸ್ ನ ಆರೋಪವಲ್ಲ‌. ಕೊರೋನಾ ಸಂದರ್ಭದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿಲ್ಲ ಎಂದು ಬೆಂಗಳೂರು ಹೈಕೋರ್ಟೇ ಸ್ಟ್ರಿಚರ್ ಹೊರಡಿಸಿದ ಬಳಿಕ ಸರ್ಕಾರ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯ ಪೌರಾಯುಕ್ತರನ್ನು ಬದಲಿದೆ ಎಂದು ಆರೋಪಿಸಿದ ಅವರು ಸರ್ಕಾರ ಶ್ವೇತಪತ್ರ ಹೊರಡಿಸಿ ಹೈಕೋರ್ಣ ನ್ಯಾಯಾದೀಶರಿಂದ ತನಿಖೆ ಮಾಡಬೇಕು ಬ್ರಷ್ಟಾಚಾರ ಮಾಡಿದವರು ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದರು.ಜೆಡಿಎಸ್ ನ ವರಿಷ್ಠ ದೇವೇಗೌಡರು ಹಾಗೂ ಕುಮಾರಸ್ವಾಮಿ ಯವರು ಯಡಿಯೂರಪ್ಪನವರ ಬಗ್ಗೆ ಅನುಕಂಪ ಹೊಂದಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು
ದೇವೇಗೌಡರಿಗೆ ಯಡಿಯೂರಪ್ಪನವರ ಬಗ್ಗೆ ಅನುಕಂಪವಿದ್ರೆ ಯಡಿಯೂರಪ್ಪ ಬ್ರಷ್ಟಾಚಾರದ ಹಣವನ್ನು ಚಕ್ ಮೂಲಕ ತೆಗೆದುಕೊಂಡ ಏಕೈಕ ಮುಖ್ಯಮಂತ್ರಿ ಅವರ ಬಗ್ಗೆ ಅನುಕಂಪ ಇರುವ ನಾಯಕರು ಅವರು ಸಹ ಅದೇ ಜಾತಿಯವರುಎಂದರು. ಇನ್ನು ಕಾಂಗ್ರೆಸ್ ಜೆಡಿಎಸ್ ಹನಿಮೂನ್ ಮುಗಿದುಹೋಗಿದೆ.ಕಾಂಗ್ರೆಸ್ ಸರ್ಕಾರದ ಬಗ್ಗೆ ದೇವೇಗೌಡರು,ಕುಮಾರಸ್ವಾಮಿ ಬ್ರಷ್ಟಾಚಾರದ ಆರೋಪ ಮಾಡಿದರೆ ಸಾಬೀತು ಮಾಡಲಿ,ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲು ಮಾಡುವ ಕುರಿತು ಇಬ್ಬರು ರಂಗ ಬಿಲ್ಲರು ದೆಹಲಿಯಲ್ಲಿದ್ದಾರೆ ಅವರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ