ತಾಯಿಯಾದ ಬಾಲಿವುಡ್ ನಟಿ ಆ್ಯಮಿ ಜಾಕ್ಸನ್! ಸಖತ್ ವೈರಲ್ಲಾದ ಪೊಟೋಗಳು ಇಲ್ಲಿವೆ ನೋಡಿ

1141

ಬಾಲಿವುಡ್ ನಟಿ ಆ್ಯಮಿ ಜಾಕ್ಸನ್ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದೆ.
ಆ್ಯಮಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ತಾಯಿಯಾಗಿ ಪ್ರಮೋಷನ್ ಪಡೆದಿದ್ದಾರೆ.

ಆ್ಯಮಿ ಗರ್ಭಿಣಿಯಾದಾಗಿನಿಂದಲೂ ಫೋಟೋಶೂಟ್ ಮಾಡಿಸಿಕೊಂಡು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಭಾರೀ ಸುದ್ದಿಯಲ್ಲಿದ್ದರು. ಈಗ ಗೆಳೆಯ ಹಾಗೂ ಮಗುವಿನೊಂದಿಗೆ ಇರುವ ಫೋಟೋವನ್ನು ಆ್ಯಮಿ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು ಸಕತ್ ವೈರಲ್ ಆಗಿದೆ.

ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ.
ಗಂಡು ಮಗುವಾಗಿರುವುದು ಖುಷಿ ತಂದಿದೆ ಎಂದು ಆ್ಯಮಿ ಇನ್‍ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ. ಗರ್ಭಿಣಿಯಾಗಲಿದ್ದಾಲೇ ತಮಗೆ ಗಂಡು ಮಗು ಎಂದರೆ ತುಂಬಾ ಇಷ್ಟ ಎಂದು ಆ್ಯಮಿ ಬರೆದುಕೊಂಡಿದ್ದರು.

ಒಂದು ವರ್ಷದ ಹಿಂದೆಯಷ್ಟೇ ಆ್ಯಮಿ ಜಾಕ್ಸನ್ ಉದ್ಯಮಿ ಜಾರ್ಜ್ ಪನಯೌಟು ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಘೋಷಿಸಿದ್ದರು. ಬ್ರಿಟನ್ ಮದರ್ಸ್ ಡೇಯಂದು ಆ್ಯಮಿ ಜಾಕ್ಸನ್ ಗೆಳೆಯನೊಂದಿಗೆ ಕುಳಿತ ಬೇಬಿ ಬಂಪ್ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಾಕಿಕೊಳ್ಳುವ ಮೂಲಕ ತಾಯಿ ಆಗುತ್ತಿರುವ ವಿಷಯವನ್ನು ತಿಳಿಸಿದ್ದರು.

ಗರ್ಭಿಣಿಯಾದ ಬಳಿಕ ಗೆಳೆಯ ಜಾರ್ಜ್ ಜೊತೆ ಮೇ 5ರಂದು ನಿಶ್ಚಿತಾರ್ಥ ಸಹ ಮಾಡಿಕೊಂಡಿದ್ದರು. ತಮ್ಮ ಪ್ರೆಗ್ನೆನ್ಸಿ ಸಮಯವನ್ನು ತುಂಬಾ ಎಂಜಾಯ್ ಮಾಡಿದ್ದ ಆ್ಯಮಿ, ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡು ಸಂತಸ ಹಂಚಿಕೊಂಡಿದ್ದರು.

ಆ್ಯಮಿ ಜಾಕ್ಸನ್ ಗರ್ಭಿಣಿಯಾದಾಗಿನ ಕೆಲವು ಪೋಟೋಗಳು ಇಲ್ಲಿವೆ ನೋಡಿ:-
Leave a Reply

Your email address will not be published. Required fields are marked *