ನವದೆಹಲಿ: ಕೇಂದ್ರ ಸಚಿವ ಸುರೇಶ್ ಅಂಗಡಿಯವರು ಕರೋನಾ ದಿಂದಾಗಿ ತೀವ್ರ ಉಸಿರಾಟದ ಸಮಸ್ಯೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನ ಹೊಂದಿದ್ದಾರೆ.
ಸುರೇಶ್ ಅಂಗಡಿಯವರಿಗೆ 65 ವರ್ಷ ವಯಸ್ಸಾಗಿತ್ತು. 1955 ಜೂನ್ 1ರಂದು ಜನಿಸಿದ ಅಂಗಡಿಯವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿ ಸಂಸದರಾಗಿದ್ದರು. ಪ್ರಸ್ತುತ ಕೇಂದ್ರ ರೈಲ್ವೆ ಖಾತೆಯ ಸಹಾಯಕ ಸಚಿವರಾಗಿದ್ದರು.
ಕಳೆದ ಒಂದು ವಾರದ ಹಿಂದೆ ಇವರಿಗೆ ಕರೋನಾ ಪಾಸಿಟಿವ್ ಇರುವುದು ತಿಳಿದಿದ್ದು ಚಿಕಿತ್ಸೆ ಪಡೆಯುತಿದ್ದರು.ಆದರೇ ಇಂದು ಉಸಿರಾಟದ ಸಮಸ್ಯೆ ಉಲ್ಭಣವಾದ್ದರಿಂದ ದೆಹಲಿಯ ಏಮ್ಸ್ ಗೆ ಕರೆತಂದು ಚಿಕಿತ್ಸೆ ನೀಡಲಾಗುತಿತ್ತು.ಆದರೇ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ.
ವರದಿ:- ಪ್ರದೀಪ್ .ಜಿ.ಎಸ್.