ಕರ್ನಾಟಕ ಲಾಕ್ ಔಟ್ ! ನಾಳೆಯಿಂದ ಸರ್ಕಾರಿ ಬಂದ್?

413

ಬೆಂಗಳೂರು: 9 ಜಿಲ್ಲೆಗಳಿಗೆ ವಿಧಿಸಲಾಗಿದ್ದು ಕರ್ಫ್ಯೂ ಮಾದರಿಯ ಲಾಕ್‍ಡೌನ್ ನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲಾಗಿದೆ. ಈ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ನಾಡಿನ ಜನತೆಗೆ ಮಾಹಿತಿ ನೀಡಿದ್ದಾರೆ.

ಟ್ವೀಟ್ ನಲ್ಲಿ ಏನಿದೆ:-

ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ #ಕೋವಿಡ್_19 ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9 ಜಿಲ್ಲೆಗಳಿಗೆ ಅನ್ವಯಿಸಿ 24/03/2020 ರಿಂದ 31/03/2020 ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ.

ಇಂದು ಒಂದೇ ದಿನ ಕರ್ನಾಟಕದಲ್ಲಿ ಏಳು ಕೊರೊನಾ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಆತಂಕಕ್ಕೊಳಗಾಗಿದ್ದರು. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾಗೆ 10 ಜನ ಸಾವನ್ನಪ್ಪಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ