BREAKING NEWS
Search

ನಾಳೆ ಕರಾವಳಿ ಮಲೆನಾಡಿನ ನೆರೆ ಹಾನಿ ವೀಕ್ಷಣೆಗೆ ಮುಖ್ಯಮಂತ್ರಿ ಬಿ.ಎಸ್. ವೈ !

504

ಕಾರವಾರ /ಬೆಂಗಳೂರು:- ನಾಳೆ ದಕ್ಷಿಣ ಕನ್ನಡ ,ಉಡುಪಿ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪ್ರವಾಸ ಮಾಡಲಿದ್ದಾರೆ.

ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು 12.8.2019ರಂದು ದಕ್ಷಿಣ ಕನ್ನಡ,ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ನೆರೆ ಹಾನಿ ವೀಕ್ಷಣೆ ಮಾಡುವರು,ಅಂದು ಕಾರವಾರದಲ್ಲಿ ವಾಸ್ತವ್ಯ ಹೂಡಿ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಜೊತೆ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸುವರು.

13.8.2019ರಂದು ಕಾರವಾರದಿಂದ ಹೊರಟು ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳ ಮಳೆಹಾನಿ ಕುರಿತು ಪರಿಶೀಲನೆ ನಡೆಸಿ ಬೆಂಗಳೂರಿಗೆ ವಾಪಸಾಗುವರು.

ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಆದ ಪ್ರವಾಹದ ಹಾನಿ ಕುರಿತು ಅಧಿಕಾರಿಗಳು ಸರ್ವೆ ನಡೆಸಿ ಮಾಹಿತಿ ನೀಡುವಂತೆ ಸೂಚಿಸಲಾಗಿದ್ದು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸರ್ವೆ ಕಾರ್ಯ ಬರದಿಂದ ಸಾಗುತ್ತಿದೆ.

ಮುಖ್ಯಮಂತ್ರಿ ರವರ ಕಾರ್ಯಕ್ರಮವನ್ನು ಕಾಯ್ದಿರಿಸಲಾಗಿದೆ ಎಂದು ತಿಳಿದುಬಂದಿದ್ದು ಬದಲಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.Leave a Reply

Your email address will not be published. Required fields are marked *