ಮುಂದಿ‌ನ ವಾರದಿಂದ ನಾಲ್ಕು ರಾಜ್ಯಗಳಿಗೆ ಕರೋನಾ ಲಸಿಕೆ!ಕರ್ನಾಟಕದಲ್ಲಿ ಸಿದ್ದವಾಯ್ತು ತಯಾರಿ.

473

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ನಿಯಂತ್ರಣ ಉದ್ದೇಶದಿಂದ ಲಸಿಕೆ ನೀಡಲು ಕೇಂದ್ರ ಸರ್ಕಾರ ನಾಲ್ಕು ರಾಜ್ಯಗಳಿಗೆ ಮೊದಲ ಹಂತದಲ್ಲಿ ಲಸಿಕೆ ವಿತರಣೆಗೆ ಚಟುವಟಿಕೆ ಪ್ರಾರಂಭಿಸಿದೆ.

ಮೊದಲ ಹಂತದಲ್ಲಿ ಡಿಸೆಂಬರ್ 28 ಮತ್ತು 29ರಂದು ಆಂಧ್ರಪ್ರದೇಶ, ಅಸ್ಸಾಂ, ಗುಜರಾತ್ ಮತ್ತು ಪಂಜಾಬ್ ರಾಜ್ಯಗಳಲ್ಲಿ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಬಳಿಕ ಕೇಂದ್ರ ಆರೋಗ್ಯ ಸಚಿವಾಲಯದ ಮಾರ್ಗದರ್ಶನದಂತೆ ಇತರ ರಾಜ್ಯಗಳಿಗೂ ಸಹ ಲಸಿಕೆ ವಿತರಣೆ ಮಾಡಲಿದೆ.

ಲಸಿಕೆ ನೀಡುವ ಕುರಿತು ರಾಜ್ಯಗಳು ಸೂಕ್ತ ಕಾರ್ಯ ಯೋಜನೆಯನ್ನು ರೂಪಿಸಿವೆ.

ಈ ಸಂಬಂಧ ರಾಷ್ಟ್ರಮಟ್ಟದಲ್ಲಿ 2,360 ಮಂದಿಗೆ ಸೂಕ್ತ ತರಬೇತಿ ನೀಡಲಾಗಿದ್ದು, ಇವರು ವಿವಿಧ ಹಂತಗಳಲ್ಲಿ ಲಸಿಕೆ ನೀಡುವ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾರ್ಗದರ್ಶನ ಮಾಡುತ್ತಿದೆ. 6,81,604 ಮಂದಿ ವೈದ್ಯಕೀಯ ಅಧಿಕಾರಿಗಳನ್ನು ಈ ಉದ್ದೇಶಕ್ಕಾಗಿ ಸಜ್ಜುಗೊಳಿಸಲಾಗಿದೆ. ಲಸಿಕೆ ನೀಡುವ ಪ್ರಕ್ರಿಯೆ ಮುಂದಿನ ದಿನಗಳಲ್ಲಿ ಎಲ್ಲಾ ರಾಜ್ಯಗಳಲ್ಲಿ ಪ್ರಾರಂಭವಾಗಲಿದೆ.

ಪ್ರತಿಯೊಂದು ಜಿಲ್ಲೆಗಳಲ್ಲೂ ತನ್ನದೇ ಆದ ಕಾರ್ಯಯೋಜನೆಯನ್ನು ರೂಪಿಸಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಲಸಿಕೆ ನೀಡಲು ಸಜ್ಜಾಗುತ್ತಿದ್ದಾರೆ.

ಜಿಲ್ಲಾ ಕೇಂದ್ರಗಳಲ್ಲಿ ಲಸಿಕೆ ಸಂಗ್ರಹ.


ಕರ್ನಾಟಕ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲೂ ಲಸಿಕೆ ಸಂಗ್ರಹಕ್ಕೆ ಕೋಲ್ಡ್ ಸ್ಟೋರೇಜ್ ವ್ಯವಸ್ತೆ ಕಲ್ಪಿಸಲಾಗಿದೆ. ಇದರ ಮಾನಿಟರಿಂಗ್ ಅನ್ನು ಆ ಜಿಲ್ಲೆಯ ಆರೋಗ್ಯ ಇಲಾಖೆ ನೋಡಿಕೊಳ್ಳಲಿದೆ.

ಲಸಿಕೆ ದೊರೆತ ನಂತರ ಗ್ರಾಮ ಮಟ್ಟದಲ್ಲಿ ಹಂತ ಹಂತವಾಗಿ ನೀಡಲಾಗುವುದು ಎಂಬ ಮಾಹಿತಿ ದೊರೆತಿದೆ.

ಸುದ್ದಿ ಮೂಲ:- ಯು.ಎನ್.ಐ .
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ