BREAKING NEWS
Search

ಆ ನಾಯಿಯ ಹೊಟ್ಟೆಯಲ್ಲಿತ್ತು ಬರೋಬ್ಬರಿ ಹತ್ತು ಕ್ಯಾನ್ಸರ್ ಗಡ್ಡೆಗಳು:ಮೂರು ತಾಸಿನ ಶಸ್ತ್ರಚಿಕಿತ್ಸೆಯಲ್ಲಿ ಮರುಜೀವ!

262

ಧಾರವಾಡ: ಮನುಷ್ಯರಿಗೆ ಕ್ಯಾನ್ಸರ್ ಬರುವುದು ಸಾಮಾನ್ಯ. ಆದ್ರೆ ಇಂದಿನ ವಾತಾವರಣದಲ್ಲಿ ಪ್ರಾಣಿಗಳಿಗೂ ಸಹ ಕ್ಯಾನ್ಸರ್ ನಂತಹ ಮಾರಕ ಕಾಯಿಲೆ ಅಂಟಿಕೊಳ್ಳುತ್ತಿದೆ.

ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಪಶು ಚಿಕಿತ್ಸಾ ವಿಭಾಗದ ವೈದ್ಯ ಡಾ. ಅನಿಲಕುಮಾರ ಪಾಟೀಲ ಮತ್ತು ತಂಡ, ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಾಯಿಯೊಂದಕ್ಕೆ ವಿಶೇಷ ಚಿಕಿತ್ಸೆ ಮಾಡಿ, ಅದರ ಹೊಟ್ಟೆಯೊಳಗಿನ ಹತ್ತು ಕ್ಯಾನ್ಸರ್ ಗಡ್ಡೆಗಳನ್ನು ಹೊರತೆಗೆದಿದ್ದಾರೆ.

ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ
ಲ್ಯಾಬ್ರೊಡಾರ್ ನಾಯಿಯೇ ಈ ವಿಶೇಷ ಚಿಕಿತ್ಸೆಗೆ ಒಳಗಾಗಿದ್ದು, ಈ ನಾಯಿ ಅಬ್ಡೋಮಿನಲ್ ಟ್ಯೂಮರ್ ಎಂಬ ಕ್ಯಾನ್ಸರ್ ಗಡ್ಡೆ ಕಾಯಿಲೆಗೆ ತುತ್ತಾಗಿತ್ತು.

ಇದೇ ನಾಯಿಗೆ ಒಂದೂವರೆ ವರ್ಷ ಇದ್ದಾಗಲು ಸಹ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು.‌ ಕಳೆದ ಹತ್ತು ದಿನಗಳಿಂದ ನಾಯಿ ಸರಿಯಾಗಿ ಆಹಾರ ಸೇವಿಸದೇ ಒದ್ದಾಡುತಿತ್ತು. ಅದು ಏನೇ ತಿಂದರೂ ವಾಂತಿ ಮಾಡಿಕೊಳ್ಳುತ್ತಿತ್ತು. ಈ ಹಿನ್ನೆಲೆಯಲ್ಲಿ ನಾಯಿಯನ್ನು ಡಾ. ಅನಿಲಕುಮಾರ ಬಳಿ ತರಲಾಗಿತ್ತು. ಬಳಿಕ ಸೋನೋಗ್ರಾಫಿ ಮಾಡಿ ನೋಡಿದಾಗ ಹೊಟ್ಟೆಯೊಳಗೆ ಗಂಟುಗಳಿರುವುದು ಪತ್ತೆಯಾಗಿದ್ದವು.

ಸತತ ಮೂರು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ಡಾ. ಅನೀಲ ಕುಮಾರ್ ಪಾಟೀಲ‌್ ನೇತೃತ್ವದ ತಂಡ, ನಾಯಿಯ ಹೊಟ್ಟೆಯಿಂದ ಗಡ್ಡೆ ತೆಗೆಯುವಲ್ಲಿ ಯಾಶಸ್ವಿಯಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ