ಬೆಂಗಳೂರು :-ಮಾಜಿ ಮಂತ್ರಿಗಳ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ತಮ್ಮ ದೂರನ್ನು ವಾಪಾಸ್ ಪಡೆದಿದ್ದಾರೆ.
ದಾಖಲಿಸಿದ್ದ ದೂರನ್ನ ಹಿಂಪಡೆಯಲು ದಿನೇಶ್ ಕಲ್ಲಹಳ್ಳಿ ತಮ್ಮ ವಕೀಲರ ಮೂಲಕ ಪತ್ರವನ್ನ ಪೊಲೀಸ್ ಠಾಣೆಗೆ ತಲುಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಾರ್ಚ್ 2ರಂದು ಮಾಜಿ ಸಚಿವರ ವಿರುದ್ಧ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಸಂಬಂಧ ಶುಕ್ರವಾರ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು.
ವೀಡಿಯೋ ಸಂಚಲನ ಸೃಷ್ಟಿಸಿ ಮಾಜಿ ಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದರು.
ಮಾಧ್ಯಮಗಳ ಜೊತೆ ಮಾತನಾಡಿದ್ದ ದಿನೇಶ್ ಕಲ್ಲಹಳ್ಳಿ, ಇನ್ನೂ ಮೂವರ ವೀಡಿಯೋಗಳು ತಮ್ಮ ಬಳಿಯಲ್ಲಿರುವ ಬಗ್ಗೆ ಹೇಳಿಕೆ ನೀಡಿದ್ದರು.
ಇಂದು ಮಧ್ಯಾಬ ತಮ್ಮ ಲೆಟರ್ ಹೆಡ್ ನಲ್ಲಿಯೇ ಪತ್ರ ಬರೆದಿದ್ದು , ಪತ್ರವನ್ನ ದಿನೇಶ್ ವಕೀಲರು ಪೊಲೀಸರಿಗೆ ತಲುಪಿಸಲಿದ್ದಾರೆ.
ಆದ್ರೆ ದಿಢೀರ್ ಎಂದು ದಿನೇಶ್ ಯೂ ಟರ್ನ್ ಪಡೆದಿದ್ದು ಯಾಕೆ ಅನ್ನೋದರ ಬಗ್ಗೆ ಪ್ರಶ್ನೆ ಹುಟ್ಟಿಕೊಂಡಿದೆ.