BREAKING NEWS
Search

ಶಿವಮೊಗ್ಗದಲ್ಲಿ ಶಾಂತಿಸಭೆ:ಸಾರ್ವಜನಿಕರ ಸಹಕಾರ ಕೇಳಿದ ಜಿಲ್ಲಾಧಿಕಾರಿ.

619

Up to date news| ಅಹಿತಕರ ಘಟನೆ ನಡೆಯದಂತೆ ಇಂದಿನಿಂದ ದಿನಾಂಕ 12-12-2020 ರ ವರೆಗೆ ಶಿವಮೊಗ್ಗ ನಗರದಾಧ್ಯಾಂತ 144 ಸೆಕ್ಷನ್ ಅನ್ನು ಮುಂದುವರೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅನಪೇಕ್ಷಿತ ಘಟನೆಗಳಿಂದ ಕಳೆದ ಒಂದು ವಾರದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆ ಉಂಟಾಗಿದೆ. ಎಲ್ಲರೂ ಸಾಮರಸ್ಯದಿಂದ ಬಾಳುವ ವಾತಾವರಣವನ್ನು ನಿರ್ಮಿಸುವುದು ನಮ್ಮ ಆದ್ಯತೆಯಾಗಿದೆ. ನಗರದ ಉತ್ತಮ ಹೆಸರು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ನಗರದ ಜನತೆಯಲ್ಲಿರುವ ಭಯದ ವಾತಾವರಣವನ್ನು ಹೋಗಲಾಡಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ಪ್ರತಿಯೊಬ್ಬರೂ ಇದಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣನೆ-ಡಿಸಿ

ಮೆಗ್ಗನ ಆಸ್ಪತ್ರೆಯ ನೌಕರ ಅಪ್ರಾಪ್ತೆ ಮೇಲೆ ನಡೆಸಿದ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತಪ್ಪಿತಸ್ಥರಿಗೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು, ಶಿವಮೊಗ್ಗ ನಗರದಲ್ಲಿ ಗಾಂಜಾ ಪ್ರಭಾವದಿಂದ ಹಲವಾರು ಅಪರಾಧ ಕೃತ್ಯಗಳು ಸಂಭವಿಸುತ್ತಿರುವ ಬಗ್ಗೆ ಹಲವು ಮಂದಿ ಕಳವಳ ವ್ಯಕ್ತಪಡಿಸಿದ್ದು, ಇದನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಔಷಧಿಗಳನ್ನು ಉದ್ದೀಪನವಾಗಿ ಬಳಸುವುದನ್ನು ತಡೆಯುವ ನಿಟ್ಟಿನಲ್ಲಿ ಫಾರ್ಮಸಿಸ್ಟ್ ಗಳ ಸಭೆಯನ್ನು ಆದಷ್ಟು ಬೇಗನೆ ಕರೆಯಲಾಗುವುದು. ವೈಯಕ್ತಿಕವಾಗಿ ನಡೆಯುವ ಘಟನೆಗಳನ್ನು ಸಾಮುದಾಯಿಕವಾಗಿ ನೋಡುವುದರಿಂದ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗುತ್ತದೆ. ಇದಕ್ಕೆ ಯಾರೂ ಆಸ್ಪದ ನೀಡಬಾರದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಅವರು ಮಾತನಾಡಿ, ಶಿವಮೊಗ್ಗ ನಗರದ ಸಾರ್ವಜನಿಕರ ಸಹಕಾರದಿಂದ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಮೊಹಲ್ಲಾ ಸಭೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸಲಾಗುವುದು. ಸಾರ್ವಜನಿಕರು ಯಾವುದೇ ದೂರುಗಳಿದ್ದರೂ, ನೇರವಾಗಿ ತಮ್ಮನ್ನು ಕಚೇರಿಯಲ್ಲಿ ಭೇಟಿ ಮಾಡಬಹುದಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ನಾಗರೀಕರು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮನೆಯ ಮುಂದೆ ರಸ್ತೆಗೆ ಅಭಿಮುಖವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಅವರು ಮನವಿ ಮಾಡಿದರು.

ವಿವಿಧ ಸಮುದಾಯಗಳ ಪ್ರತಿನಿಧಿಗಳು ಮಾತನಾಡಿ ಹಲವಾರು ಸಲಹೆಗಳನ್ನು ಸಭೆಯ ಮುಂದಿರಿಸಿದರು. ನಗರದಲ್ಲಿ ಗಾಂಜಾ ಹಾವಳಿ ತೀವ್ರವಾಗಿದ್ದು, ಇದನ್ನು ಕಟ್ಟುನಿಟ್ಟಿನಿಂದ ನಿಯಂತ್ರಿಸಿದರೆ ಮಾತ್ರ ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ಸಾಧ್ಯ. 144 ಸೆಕ್ಷನ್ ನಿಷೇಧಾಜ್ಞೆ ಬಗ್ಗೆ ಸರಿಯಾಗಿ ಮಾಹಿತಿ ನೀಡದಿರುವುದರಿಂದ ಜನಸಾಮಾನ್ಯರಿಗೆ, ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಬಹಳ ತೊಂದರೆಯಾಗಿದೆ. ಸೆಕ್ಷನ್ ಜಾರಿಯಲ್ಲಿರುವಾಗ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿ ಎಂದು ವಿವಿಧ ಗಣ್ಯರು ಮನವಿ ಮಾಡಿದರು.

ಸಭೆಯಲ್ಲಿ ಉಪ ಮೇಯರ್ ಸುರೇಖಾ ಮುರುಳೀಧರ್ ಸೇರಿದಂತೆ ವಿವಿಧ ಸಮಾಜಗಳ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.

ಶಿವಮೊಗ್ಗ ಜಿಲ್ಲೆಯ ಇಂದಿನ ತಾಲೂಕುವಾರು ಕರೋನಾ ಪಾಸಿಟಿವ್ ವಿವರ ಈ ಕೆಳಗಿನಂತಿದೆ




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!