ಹೊನ್ನಾವರ ಖಾಸಗಿ ಬಂದರು ನಿರ್ಮಾಣಕ್ಕೆ ವಿರೋಧ-ಮೀನುಗಾರಿಕೆ ಬಂದ್ ಮಾಡಿ ರೋಡಿಗಿಳಿದ ಮೀನುಗಾರರು.

359

ಹೊನ್ನಾವರ :- ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ಹೊನ್ನಾವರದಲ್ಲಿಂದು ಮೀನುಗಾರರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಹೊನ್ನಾವರ ತಾಲ್ಲೂಕಿನ ಕಾಸರಕೋಡಿನಿಂದ ಪ್ರತಿಭಟನಾ ಮೆರವಣಿಗೆಯನ್ನ ಪ್ರಾರಂಭಿಸಿದ ಮೀನುಗಾರರು ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ಬೃಹತ್ ರ್ಯಾಲಿ ನಡೆಸಿದರು.

ರಾಷ್ಟ್ರೀಯ ಮೀನುಗಾರರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದು ,ಬಂದರು ನಿರ್ಮಾಣ ಕಂಪೆನಿ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಕಾಸರಕೋಡಿನಿಂದ ಹೊನ್ನಾವರ ಸೇತುವೆ ಮೂಲಕ ಶರಾವತಿ ವೃತ್ತದವರೆಗೆ ರ್ಯಾಲಿಯನ್ನ ನಡೆಸಿದ್ದು ಜಿಲ್ಲೆಯ ಕಾರವಾರ, ಕುಮಟಾ, ಭಟ್ಕಳ ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಮೀನುಗಾರರು ಜಮಾವಣೆಯಾಗಿದ್ದರು.

ವಾಣಿಜ್ಯ ಬಂದರು ನಿರ್ಮಾಣ ಯೋಜನೆಯನ್ನ ಹಿಂಪಡೆದು ಮೀನುಗಾರಿಕೆ ಉಳಿಯಲು ಅವಕಾಶ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರತಿಭಟನೆ ಹಿನ್ನಲೆ ಇಂದು ಜಿಲ್ಲೆಯಾದ್ಯಂತ ಮೀನುಗಾರಿಕೆ ಬಂದ್ ಆಗಿದ್ದು ರ್ಯಾಲಿಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ