ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಮಧು ಬಂಗಾರಪ್ಪ!

749

ಶಿವಮೊಗ್ಗ :- ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ಶೀಘ್ರದಲ್ಲಿ ಗುಡ್ ಬೈ ಹೇಳಲಿದ್ದು, ಶೀಘ್ರವೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್ ತಿಳಿಸಿದ್ದಾರೆ.

ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್, ಮಧುಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗುವುದು ಪಕ್ಷದ ಸಂಘಟನೆ ದೃಷ್ಟಿಯಿಂದ ಅನುಕೂಲವಾಗಲಿದೆ. ಜೊತೆಗೆ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದು ಹೇಳಿದರು.

ಜೆಡಿಎಸ್ ನಿಂದ ವಿಮುಖವಾಗಿರುವ ಮಧು ಬಂಗಾರಪ್ಪ!
ಸದ್ಯ ಮಧು ಬಂಗಾರಪ್ಪನವರು ಜರಡಿಎಸ್ ಕಾರ್ಯಕ್ರಮದಲ್ಲಿ ಹೆಚ್ಚು ಭಾಗವಹಿಸುತಿಲ್ಲ.ಜೊತೆಗೆ ಕಳೆದ ಚುನಾವಣೆಯಲ್ಲಿಯೇ ಕಾಂಗ್ರೆಸ್ ಸೇರುವ ಕುರಿತು ಗಾಳಿ ಸುದ್ದಿಗಳು ಹರಿದಾಡಿದ್ದವು.ಆದರೇ ಈ ಬಗ್ಗೆ ಮಧು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಆದ್ರೆ ಸೊರಬ ದಲ್ಲಿ ರಾಜಕೀಯ ಬದಲಾವಣೆ ಆಗಿದೆ. ಮೊದಲು ಕಾಂಗ್ರೆಸ್ ನಲ್ಲಿ ಇದ್ದ ಕುಮಾರಬಂಗಾರಪ್ಪ ಬಿಜೆಪಿಗೆ ಸೇರ್ಪಡೆಗೊಂಡು ಸೊರಬ ಕ್ಷೇತ್ರದಿಂದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಧು ಬಂಗಾರಪ್ಪ ವಿರುದ್ಧ ಜಯ ಸಾದಿಸಿದ್ದರು. ಸೊರಬಾದಲ್ಲಿ ಜೆಡಿಎಸ್ ಹೇಳಿಕೊಳ್ಳುವ ಹಿಡಿತವಿಲ್ಲ.ಆದರೇ ಕಾಂಗ್ರೆಸ್ ಗೆ ತನ್ನದೇ ಆದ ಸ್ಥಾನವಿದೆ. ಈ ಹಿನ್ನಲೆಯಲ್ಲಿ ಮಧು ಬಂಗಾರಪ್ಪ ಮುಂದಿನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅವರಿಗೆ ಹೆಚ್ಚು ಲಾಭವಾಗಲಿದೆ ಎಂದು ಅವರ ಅಭಿಮಾನಿಗಳ ಲೆಕ್ಕಾಚಾರವಾಗಿದ್ದು ಶೀಘ್ರದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ