BREAKING NEWS
Search

ಶಿವಮೊಗ್ಗದಲ್ಲಿ ಒಂದು ದಿನಕ್ಕೆ ಸೀಮಿತವಾದ ಗಣಪತಿ ಉತ್ಸವ -ಸಂಜೆ ವಿಸರ್ಜನೆಗೆ ಆದೇಶ

291

ಶಿವಮೊಗ್ಗ : ಕೊರೊನಾ ಹಿನ್ನೆಲೆ ಜಿಲ್ಲೆಯಲ್ಲಿ ಈ ಬಾರಿಯ ಗಣಪತಿ ಉತ್ಸವವನ್ನು ರಾಜ್ಯ ಸರಕಾರದ ಆದೇಶದ ಅನ್ವಯ ಆಚರಿಸಲು ನಿರ್ಧರಿಸಲಾಗಿದೆ.

ಈ ಬಾರಿಯ ಗಣೇಶೋತ್ಸವವನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಈಗಾಗಿ ನಾಗರೀಕರು ಮುಂಜಾನೆ ಗಣಪತಿ ಪ್ರತಿಷ್ಠಾಪಿಸಿ ಸಂಜೆ ವಿಸರ್ಜನೆ ಮಾಡುವ ಮೂಲಕ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸುವಂತೆ ಸಾರ್ವಜನಿಕರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ‌ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಕೊರೊನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗಣೇಶೋತ್ಸವವನ್ನು‌ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಗಣಪತಿ ಹಬ್ಬ ಕೇವಲ ಈ ವರ್ಷಕ್ಕೆ ಅಷ್ಟೇ ಸೀಮಿತವಾಗಿಲ್ಲ. ಮುಂದಿನ ಬಾರಿಯೂ ಗಣೇಶ ಹಬ್ಬ ಬರುತ್ತದೆ. ಹೀಗಾಗಿ ಜೀವ ಉಳಿದರೆ ಮುಂದಿನ ಬಾರಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಬಹುದು ಎಂದರು.

ಜಿಲ್ಲೆಯಲ್ಲಿ ಎಲ್ಲಿ ಬೇಕಾದರೂ ಗಣಪತಿ ಪ್ರತಿಷ್ಠಾಪನೆ ಮಾಡಿ. ಆದರೆ ಗಣಪತಿ ತರುವ ವೇಳೆಯಲ್ಲಿ ಆಗಲಿ, ವಿಸರ್ಜನೆ ಮಾಡುವ ಸಂದರ್ಭದಲ್ಲಿ ಆಗಲಿ ಮೆರವಣಿಗೆ ಮಾಡುವಂತಿಲ್ಲ.‌ ಮನೆಯಲ್ಲಿ ಕೂರಿಸುವ ಗಣಪತಿ ಮೂರ್ತಿ 2 ಅಡಿ ಮೀರಬಾರದು ಜೊತೆಗೆ 4 ಜನಕ್ಕಿಂತ ಹೆಚ್ಚಿನ ಮಂದಿ ಭಾಗವಹಿಸಬಾರದು. ಇನ್ನು‌ ಅದೇ ರೀತಿ ಸಾರ್ವಜನಿಕವಾಗಿ ಕೂರಿಸುವ ಗಣಪತಿ 4 ಅಡಿಗಿಂತ ಮೀರಿರಬಾರದು ಹಾಗೂ ಗಣಪತಿ ತರಲು 20 ಕ್ಕಿಂತ ಹೆಚ್ಚು ಮಂದಿ ಭಾಗವಹಿಸುವಂತಿಲ್ಲ. ಅಲ್ಲದೇ ಮುಂಜಾನೆ ಗಣಪತಿ ಪ್ರತಿಷ್ಠಾಪಿಸಿದರೆ ಸಂಜೆ ಕತ್ತಲು ಕಳೆಯುವುದರೊಳಗೆ ಗಣಪತಿ ವಿಜರ್ಜನೆ ಮಾಡಬೇಕು ಎಂದು ಸಚಿವರು ತಿಳಿಸಿದ್ದಾರೆ.

DCIB ತಂಡದಿಂದ ದಾಳಿ, ಮಟ್ಕಾ ಜೂಜಾಟ ಆರೋಪಿತನ ಬಂಧನ

ಶಿವಮೊಗ್ಗ :- ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮಿ ಟಾಕೀಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನು ಕಾನೂನು ಬಾಹಿರವಾಗಿ ಮಟ್ಕಾ ಜೂಜಾಟ ಬರೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕುಮಾರಸ್ವಾಮಿ, ಪೊಲೀಸ್ ನಿರೀಕ್ಷಕರು, ಡಿಸಿಐಬಿ ವಿಭಾಗ ಹಾಗೂ ಸಿಬ್ಬಂದಿಗಳನ್ನೊಳಗೊಂಡ ಜಿಲ್ಲಾ ಪೊಲೀಸ್ ಕಛೇರಿಯ ಡಿಸಿಐಬಿ ತಂಡವೊಂದನ್ನು ದಿನಾಂಕ:18-08-2020 ರಂದು ಕಳುಹಿಸಿ ದಾಳಿ ಮಾಡಲಾಗಿರುತ್ತದೆ.

ಕಾರ್ಯಾಚರಣೆಯಲ್ಲಿ ಆರೋಪಿ ಹೇಮಂತ, 24 ವರ್ಷ ವಾಸ ವಿನೋಬನಗರ, ಶಿವಮೊಗ್ಗ ಈತನನ್ನು ಬಂಧಿಸಿ, ಆರೋಪಿತನಿಂದ ರೂ 13,100/- (ರೂಪಾಯಿ ಹದಿಮೂರು ಸಾವಿರದ ನೂರು) ನಗದು ಹಣ ಹಾಗೂ ಓ.ಸಿ ಗೆ ಸಂಬಂಧಿಸಿದ ದಾಖಲೆಗಳನ್ನು ಅಮಾನತ್ತು ಪಡಿಸಿಕೊಂಡು, ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದೆ.

ಶಿವಮೊಗ್ಗ ಜಿಲ್ಲೆಯ ಇಂದಿನ ಕರೋನಾ ಪಾಸಿಟಿವ್ ವರದಿ ಇಲ್ಲಿದೆ:-




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ