BREAKING NEWS
Search

ಹೊಸನಗರ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ-ಶಾಕ್ ನಿಂದ ಮೂವರು ಸ್ಥಳದಲ್ಲೇ ಸಾವು!

815

ಶಿವಮೊಗ್ಗ : ವಿದ್ಯುತ್ ಕಂಬಕ್ಕೆ ಟಾಟಾ ಇಂಡಿಕಾ ಕಾರು ಢಿಕ್ಕಿಹೊಡೆದ ಪರಿಣಾಮ ವಿದ್ಯುತ್ ತಗುಲಿ ಕಾರಿನಲ್ಲಿದ್ದ ಮೂರು ಮಂದಿ ಸ್ಥಳದಲ್ಲೇ‌ ಮೃತಪಟ್ಟದ್ದು ಇನ್ನುಳಿದ ಮೂರು ಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಬಳಿ ನಡೆದಿದೆ.

ಮೃತಪಟ್ಟವರನ್ನು ಕಲಾವತಿ (65), ಲೋಹಿತ್ (36), ಶಶಾಂಕ್ (10) ಎಂದು ಗುರುತಿಸಲಾಗಿದ್ದು ರಿಪ್ಪನ್ ಪೇಟೆ ನಿವಾಸಿಗಳಾದ ಇವರು ಕಳೆದ ಎರಡು ದಿನದ ಹಿಂದೆ ರಿಪ್ಪನ್ ಪೇಟೆಯಿಂದ ಧರ್ಮಸ್ಥಳಕ್ಕೆ ತೆರಳಿದ್ದರು. ಇಂದು ಮುಂಜಾನೆ ಧರ್ಮಸ್ಥಳದಿಂದ ರಿಪ್ಪನ್ ಪೇಟೆಗೆ ವಾಪಸ್ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆ ಸಂಬಂಧ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ