ಜೋಯಿಡಾ ತಹಶಿಲ್ದಾರ್ ಕಚೇರಿಯಲ್ಲಿ ಎಸಿಬಿ ದಾಳಿ! ಲಂಚ ಸ್ವೀಕರಿಸುತಿದ್ದ ಅಧಿಕಾರಿ ಬಲೆಗೆ

1852

ಕಾರವಾರ :- ಲಂಚ ಸ್ವೀಕರಿಸುತಿದ್ದ ತಾಹಶಿಲ್ದಾರ್ ಕಚೇರಿ ಸಿಬ್ಬಂದಿ ಮೇಲೆ ಎಸಿಬಿ ದಾಳಿ ನೆಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಹಶಿಲ್ದಾರ್ ಕಚೇರಿಯಲ್ಲಿ ನಡೆದಿದೆ.

ಎಸಿಬಿ ಡಿವೈಎಸ್ಪಿ ಶ್ರೀಕಾಂತ್ ನೇತ್ರತ್ವದಲ್ಲಿ ದಾಳಿ ನಡೆದಿದ್ದು ಜೋಯಿಡಾ ತಹಶಿಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಮಂಜುನಾಥ್ ಹುಚ್ಚಣ್ಣನವರ್ ಎಸಿಬಿ ಬಲೆಗೆ ಬಿದ್ದ ದ್ವಿತೀಯ ದರ್ಜೆ ಸಹಾಯಕನಾಗಿದ್ದಾನೆ.ಗೋಪಿಕಾ ಶಾಂತ ಸಾವಂತ್ ಇವರ ಹೆಸರು ಬದಲಾವಣೆಗೆ ಇವರ ಸಂಬಂಧಿ ಮೋಹನ್ ದೇಸಾಯಿ ಬಳಿ 11 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ ಮುಂಜುನಾಥ್ ಹುಚ್ಚಣ್ಣನವರ್ ಇಂದು ಮೋಹನ್ ದೇಸಾಯಿ ಯಿಂದ ಜೋಯಿಡಾ ತಹಶಿಲ್ದಾರ್ ಕಚೇರಿಯಲ್ಲಿ ಮುಂಗಡ ಹಣ ಎರಡುಸಾವಿರ ಲಂಚ ಸ್ವೀಕರಿಸುವಾಗ ಹಣದ ಸಮೇತ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು ತನಿಖೆ ಮುಂದುವರೆದಿದೆ.

ಇನ್ನು ದೂರು ನೀಡಿದ ದೂರುದಾರರ ಜೊತೆ ಮೋಹನ ದೇಸಾಯಿ, ಅಧ್ಯಕ್ಷರು ಕಾಳಿ ಬ್ರಿಗೇಡ ಅವುರ್ಲಿ ಫಟಕ.
ರವಿ ರೇಡಕರ ಮುಖ್ಯ ಸಂಚಾಲಕರು ಕಾಳಿ ಬ್ರಿಗೇಡ, ಸತೀಶ ನಾಯ್ಕ, ಪ್ರಭಾಕರ ನಾಯ್ಕ, ವಿಷ್ಣು ದೇಸಾಯಿ, ಕಿರಣ ನಾಯ್ಕ, ಅಜೀತ ಟೆಂಗ್ಸೆ, ರಾಜೇಶ ದೇಸಾಯಿ ಈ ಸಂದರ್ಬದಲ್ಲಿ ಇದ್ದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ