BREAKING NEWS
Search

ಕದಂಬ ನೌಕಾ ನೆಲೆಯಿಂದ 15 ಲಕ್ಷ ಕೊಂಡೊಯ್ಯುತಿದ್ದ ನೌಕಾ ನೆಲೆ ಅಧಿಕಾರಿ ನೌಕಾ ನೆಲೆ ಪೊಲೀಸರ ವಶಕ್ಕೆ

958

ಕಾರವಾರ :- ಸೂಟ್‌ಕೇಸ್‌ ಮೂಲಕ 15 ಲಕ್ಷಕ್ಕೂ ಮಿಕ್ಕಿ ಹಣ ಕೊಂಡೊಯ್ಯುತ್ತಿದ್ದ ನೌಕಾನೆಲೆಯ ಅಧಿಕಾರಿಯನ್ನು ನೌಕಾನೆಲೆಯ ಪೊಲೀಸರು ವಶಕ್ಕೆ ಪಡೆದ ಘಟನೆ ಇಂದು ನಡೆದಿದೆ.
ನೌಕಾನೆಲೆಯಲ್ಲಿರುವ ಮಿಲಿಟರಿ ಎಂಜಿನಿಯರಿಂಗ್ ಸರ್ವಿಸ್‌ನ ಅಧಿಕಾರಿಯೋರ್ವ ನೇವಲ್ ಬೇಸ್‌ನಲ್ಲೇ 15 ಲಕ್ಷ ರೂ. ಗಿಂತಲೂ ಮಿಕ್ಕಿ ಹಣವನ್ನು ಸೂಟ್‌ಕೇಸ್ ಮೂಲಕ ಬೇಸ್‌ನ‌ ಹೊರಗಡೆ ಕೊಂಡೊಯ್ಯುತ್ತಿದ್ದ. ಈ ವೇಳೆ
ಸೂಟ್‌ಕೇಸ್ ಜತೆ ಹೊರ ಬರುತ್ತಿದ್ದ ಎಂಇಎಸ್ ಅಧಿಕಾರಿಯನ್ನು ನೇವಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ, ಎಂಇಎಸ್ ಅಧಿಕಾರಿಯನ್ನು ಹಿಡಿದು‌ ನೇವಲ್ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಭಾರೀ ಮೊತ್ತದ ಹಣ ಎಲ್ಲಿಂದ ಬಂತು ? ಎಲ್ಲಿಗೆ ಸಾಗಾಟವಾಗ್ತಿದೆ ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. ಈ ಹಿಂದೆ ಅಧಿಕಾರಿಯೋರ್ವರು ಲಂಚ ಪಡೆದ ಪ್ರಕರಣ, ಬಳಿಕ ಸಿಬ್ಬಂದಿ ಪಾಕಿಸ್ತಾನಕ್ಕೆ ಮಾಹಿತಿ ನೀಡುತ್ತಿದ್ದ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಪ್ರಸ್ತುತ, ಎಂಇಎಸ್ ಅಧಿಕಾರಿಯಲ್ಲಿ ದೊರೆತಿರುವ ಹಣ ಹಲವು ಅನುಮಾನಗಳಿಗೆ ಎಡೆಮಾಡಿದ್ದು, ವಿಚಾರಣೆಯ ಬಳಿಕವೇ ಸತ್ಯಾಂಶ ತಿಳಿದುಬರಬೇಕಾಗಿದ್ದು ಘಟನೆ ಸಂಬಂಧ ಕಾರವಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ