ಜಿಲ್ಲೆಯಲ್ಲಿ ನಿರ್ಬಂಧಿತ ಕನ್ನಡ ರಾಜ್ಯೋತ್ಸವ ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಹೇಳಿದ್ದು ಹೀಗೆ.

315

ಕಾರವಾರ:- ಕೋವಿಡ್-19 ಕಾರಣದಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಸರಳ ರೀತಿಯಲ್ಲಿ ಹೆಚ್ಚು ಜನರು ಸೇರದಂತೆ ಸ್ವಾತಂತ್ರ್ಯ ದಿನಾಚರಣೆ ಮಾದರಿಯಲ್ಲಿಯೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಆಚರಿಸಲಾಗುವುದೆಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅವರು ಹೇಳಿದರು.ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರುವ ನವೆಂಬರ್ 1 ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರದಲ್ಲಿ ಸಾಂಕೇತಿಕವಾಗಿ ಕನ್ನಡಾಂಬೆಯ ಮೆರವಣಿಗೆ ನಡೆಸಲಾಗುವುದು
ಈ ಬಾರಿ ಶಾಲಾ-ಕಾಲೇಜಿನ ಮಕ್ಕಳಿಗೆ ಪರೇಡ್‍ನಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ ಹಾಗೂ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ ಎಂದರು.

ನವೆಂಬರ್ 5 ವರೆಗೂ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವರಿಂದ ಜನಪ್ರತಿನಿಧಿಗಳು ಭಾಗವಹಿಸುವುದು ಮತ್ತು ಸರ್ಕಾರದ ಸಾಧನೆ ಬಗ್ಗೆ ಭಾಷಣದಲ್ಲಿ ಪ್ರಸ್ಥಾಪಿಸುವ ಕುರಿತು ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆ ಸಿಬ್ಬಂಧಿ ಹಾಜರಿದ್ದರು.




Leave a Reply

Your email address will not be published. Required fields are marked *