ಕರ್ನಾಟಕ ಬಂದ್! ಏನಿರುತ್ತೆ ಏನಿರಲ್ಲ ಸಂಪೂರ್ಣ ಮಾಹಿತಿ ಇಲ್ಲಿದೆ.

1118

ಬೆಂಗಳೂರು :-ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಹಾಗೂ ಕಾಯ್ದೆಗಳನ್ನ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಸೆ. 28ರಂದು ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಹೀಗಾಗಿ, ನಾಳೆ ಕೆಲ ಸೇವೆಗಳಲ್ಲಿ ವ್ಯತ್ಯಾಸ ಆಗಲಿದೆ. ಹಾಗಿದ್ದರೆ, ಆ ಸೇವೆಗಳು ಯಾವವು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

ನಾಳೆ ರೈತರು ಹಾಗೂ ಕೆಲ ಸಂಘಟನೆಗಳು ಪ್ರತಿಭಟನೆ ಮಾಡುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜನೆ ಮಾಡುವ ಸಾಧ್ಯತೆ ಇದೆ. ಟೌನ್ ಹಾಲ್, ರೈಲ್ವೆ ಸ್ಟೇಷನ್, ಮೆಜೆಸ್ಟಿಕ್ ಹಾಗೂ ಮೈಸೂರು ಬ್ಯಾಂಕ್ ಸರ್ಕಲ್‌ ಬಳಿ ಪ್ರಮುಖವಾಗಿ ಪ್ರತಿಭಟನೆ ನಡೆಯಲಿದೆ. ಹೀಗಾಗಿ ಈ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲು ನಿರ್ಧರಿಸಲಾಗಿದೆ. ಪ್ರತಿಭಟನೆ ತೀವ್ರತೆ ನೋಡಿಕೊಂಡು ಭದ್ರತೆ ಹೆಚ್ಚಿಸಲು ಹಿರಿಯ ಅಧಿಕಾರಿಗಳು ನಿರ್ಧರಿಸಿದ್ದಾರೆ. ರಾಜ್ಯದ ವಿವಿಧ ಕಡೆಗಳಲ್ಲೂ ಪ್ರತಿಭಟನೆ ನಡೆಯಲಿದೆ.

ಟೌನ್ ಹಾಲ್, ಕಾರ್ಪೋರೇಷನ್ ಸರ್ಕಲ್, ಮೈಸೂರು ಬ್ಯಾಂಕ್ ರಸ್ತೆ ಕೆಲಕಾಲ ಬಂದ್ ಆಗುವ ಸಾಧ್ಯತೆ ಇದೆ. ಕರವೇ ಕಾರ್ಯಕರ್ತರಿಂದ ರ್ಯಾಲಿ ನಡೆಯಲಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಯೋಜಿಸಲಾಗಿದೆ.

ಇನ್ನು, ಎಂದಿನಂತೆ ಸರ್ಕಾರಿ ಸ್ವಾಮ್ಯದ ವಾಹನಗಳು ಓಡಾಡಲಿವೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ ಹಾಗೂ ಮೆಟ್ರೋ ಓಡಾಟದಲ್ಲಿ ಯಾವುದೇ ವ್ಯತ್ಯಾಯ ಇರುವುದಿಲ್ಲ. ಈಗಾಗಲೇ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಅಂಗಡಿ ಮುಂಗಟ್ಟುಗಳು, ಮಾಲ್​ಗಳು ಮುಚ್ಚಿರಲಿವೆ. ಆಟೋ, ಓಲಾ, ಊಬರ್ ಮುಂತಾದ ಖಾಸಗಿ ಸಾರಿಗೆ ವ್ಯವಸ್ಥೆ ಬಂದ್​ಗೆ ಬೆಂಬಲ ಸೂಚಿಸಿದ್ದು, ಇವು ಸಂಪೂರ್ಣ ಸ್ತಬ್ಧವಾಗಲಿದೆ. ಹೋಟೆಲ್​ಗಳು ನೈತಿಕ ಬೆಂಬಲ ಮಾತ್ರ ಇರುವುದರಿಂದ ಅವು ತೆರೆದಿರಲಿವೆ.

ಉಳಿದಂತೆ ಮೆಡಿಕಲ್ ಶಾಪ್, ಆಸ್ಪತ್ರೆ, ಪೆಟ್ರೊಲ್ ಬಂಕ್, ತರಕಾರಿ-ಹಣ್ಣು ಮುಂತಾದ ಅಗತ್ಯ ಸೇವೆಗಳು ಎಂದಿನಂತೆ ಮುಂದುವರೆಯಲಿವೆ.

ಏನಿರುತ್ತೆ?

ಕರ್ನಾಟಕ ಬಂದ್ ವೇಳೆ ಹಾಲು, ಹಣ್ಣು, ತರಕಾರಿ, ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆ ಸೇವೆಗಳು ಇರಲಿವೆ. ಹೋಟೆಲ್ ಗಳು ಎಂದಿನಂತೆ ಓಪನ್ ಇರಲಿದ್ದು, ಕೆಎಸ್‌ಆರ್ ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು, ವಿಮಾನ ಸಂಚಾರ ಇರಲಿದೆ.

ಏನಿರಲ್ಲ?

ಓಲಾ-ಉಬರ್, ಆಟೋ-ಟ್ಯಾಕ್ಸಿ ಸಂಘಗಳು ಬಂದ್ ಗೆ ಬೆಂಬಲ ನೀಡಿದ್ದು, ಈ ಸೇವೆಗಳು ಇರುವುದಿಲ್ಲ. ಖಾಸಗಿ ಬಸ್, ಲಾರಿ ಸೇವೆಗಳು ಬಂದ್ ಇರಲಿವೆ ಎನ್ನಲಾಗಿದೆ. ಅಂಗಡಿ ಮುಂಗಟ್ಟು ಕ್ಲೋಸ್, ಮಾಲ್ ಗಳು ಓಪನ್ ಆಗಲ್ಲ, ಪ್ರತಿಭಟನೆಯ ತೀವ್ರತೆ ನೋಡಿಕೊಂಡು ಕೈಗಾರಿಕೆಗಳು, ಕಂಪನಿಗಳು ಮುಚ್ಚುವ ಬಗ್ಗೆ ನಿರ್ಧಾರ ಮಾಡಲು ನಿರ್ಧರಿಸಲಾಗಿದೆ.

ಬೀದರ್ ಜಿಲ್ಲೆಯಲ್ಲಿ ಹೇಗಿರಲಿದೆ?

ಗಡಿ ಜಿಲ್ಲೆ ಬೀದರ್ ನಲ್ಲಿ ಕರವೇ,ದಲಿತ,ಕಾರ್ಮಿಕ ಒಕ್ಕೂಟಗಳು,ಆಟೋ ಚಾಲಕರ ಸಂಘ,ಹೋಟೆಲ್ ಮಾಲೀಕರ ಸಂಘಗಳು ಸೇರಿದಂತೆ 15 ಹೆಚ್ಚು ಸಂಘಟನೆ ಬಂದ್ ಗೆ ಬೆಂಬಲ ವ್ಯಕ್ತ ಪಡಿಸಿವೆ.

ಹೀಗಾಗಿ ವ್ಯಾಪಾರ ವಹಿವಾಟು, ಆಟೋ ಸಂಚಾರ ಸೇರಿದಂತೆ ಎಲ್ಲವು ನಾಳೆ‌ ಬಂದ್ ಆಗಲಿವೆ.

ಬಸ್ ಸಂಚಾರ ಎಂದಿನಂತೆ ಇದ್ದು ನಾಳೆ ಪರಿಸ್ಥಿತಿ ನೋಡಿಕೊಂಡು ಬಂದ್ ಮಾಡುವ ಸಾದ್ಯತೆ ಇದೆ.

ನಾಳೆ 11 ಗಂಟೆಗೆ ರೈತ ಪರ ಸಂಘಟನೆಗಳು ನಗರದ ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿಯ ವರೆಗೆ ಬೃಹತ್ ರ್ಯಾಲಿ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಾಡಲ್ಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಹೇಗಿರಲಿದೆ?

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಬಂದ್ ಆಗುವ ಸಾಧ್ಯತೆ ಕಡಿಮೆ ಇದೆ. ಆದರೇ ಮಲೆನಾಡು ಭಾಗದಲ್ಲಿ ಅದರಲ್ಲೂ ಶಿರಸಿ,ಸಿದ್ಧಾಪುರ ಭಾಗದಲ್ಲಿ ಬಂದ್ ಆಗಲಿದ್ದು ಈಗಾಗಲೇ 40 ಸಂಘಟನೆಗಳು ಬೆಂಬಲ ನೀಡಿವೆ.ಹೀಗಾಗಿ ಮಲೆನಾಡು ಭಾಗಕ್ಕೆ ಮಾತ್ರ ಬಂದ್ ಸೀಮಿತವಾಗಿರಲಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿರಲಿದೆ?

ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲಿ ಬಂದ್ ಗೆ ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದು ಇಂದು ಅಂಗಡಿ ಮುಂಗಟ್ಟುಗಳಿಗೆ ತೆರಳಿ ನಾಳಿನ ಬಂದ್ ಗೆ ಜನರ ಸಹಕಾರ ಕೇಳಿದ್ದಾರೆ‌. ಈ ಹಿನ್ನಲೆಯಲ್ಲಿ ನಾಳೆ ಶಿವಮೊಗ್ಗ ನಗರ ಸಂಪೂರ್ಣ ಬಂದ್ ಆಗಲಿದ್ದು ಎ.ಪಿ.ಎಮ್.ಸಿ ವ್ಯವಹಾರ ಸಹ ಜಿಲ್ಲೆಯಾಧ್ಯಾಂತ ಬಂದ್ ಇರಲಿದೆ. ಬಹುತೇಕ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುವ ಸಾಧ್ಯತೆಗಳಿದ್ದು ವಾಹನ ಸಂಚಾರಗಳಿಗೆ ಹಾಗೂ ಬಸ್ ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆಗಳಿವೆ.
ಉಳಿದಂತೆ ಕರಾವಳಿ ಭಾಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಬಂದ್ ಆಗಲಿದೆ.
Leave a Reply

Your email address will not be published. Required fields are marked *