ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ದಿನಕರ್ ಶಟ್ಟಿ ನೇಮಕ.

685

ಉತ್ತರಕನ್ನಡ:-2020-21 ನೇ ಸಾಲಿನ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಮಿತಿ ಅಧ್ಯಕ್ಷರನ್ನಾಗಿ ಕುಮಟಾ ಶಾಸಕ ದಿನಕರ್ ಶಟ್ಟಿ ಅವರನ್ನು ಇಂದು ವಿಧಾನಸಭಾ ಅಧ್ಯಕ್ಷರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಕುಮಟಾದ ಶಾಸಕರಾಗಿರುವ ದಿನಕರ್ ಶಟ್ಟಿ ರವರು ಎರಡು ಬಾರಿ ಶಾಸಕರಾಗಿ ಕುಮಟಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಇವರ ಜೊತೆ ಜಿಲ್ಲೆಯ ವಿಧಾನಸಭಾ ಸದಸ್ಯರಾದ ಶಾಂತರಾಮ ಸಿದ್ದಿಯವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಹಳಿಯಾಳ ಶಾಸಕ ಆರ್.ವಿ ದೇಶಪಾಂಡೆ ನೇಮಕ.

ಸಾರ್ವಜನಿಕ ಉದ್ದಿಮೆಗಳ ಸ್ಥಾಯಿ ಸಮಿತಿಗೆ ರಾಜ್ಯ ಸರ್ಕಾರ ಹಳಿಯಾಳ ಶಾಸಕ ಆರ್.ವಿ ದೇಶಪಾಂಡೆಯನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.ಆರ್.ವಿ ದೇಶಪಾಂಡೆಯವರು ಹಿಂದಿನ ಕಾಂಗ್ರೆಸ್ ಸರ್ಕಾರವಿದ್ದಾಗ ಹಲವು ಸಚಿವ ಹುದ್ದೆಗಳನ್ನು ನಿಭಾಯಿಸಿದ ಅನುಭವ ಅವರಿಗಿದ್ದು ಹಿರಿಯ ಸದಸ್ಯರಾದ ಇವರು ಕೈಗಾರಿಕಾ ಸಚಿವರಾಗಿ ಸಹ ಕಾರ್ಯನಿರ್ವಹಿಸಿದ್ದರು.ಇನ್ನು ಈ ಸಮಿತಿಯ ಅಧ್ಯಕ್ಷರಾಗಿ ಅರವಿಂದ್ ಲಿಂಬಾವಳಿಯನ್ನು ವಿಧಾನಸಭಾ ಅಧ್ಯಕ್ಷರು ನೇಮಕ ಮಾಡಿದ್ದಾರೆ.




Leave a Reply

Your email address will not be published. Required fields are marked *