ಕರ್ನಾಟಕದ ಒಳನಾಡು ಕರಾವಳಿ ಭಾಗದಲ್ಲಿ ಭಾರಿ ಗುಡುಗು ಸಹಿತ ಮಳೆ ಮನ್ಸೂಚನೆ!

1684

ಬೆಂಗಳೂರು:- ಕರ್ನಾಟಕದ ಒಳನಾಡು ಹಾಗೂ ಕೇರಳದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯದಲ್ಲಿ ಗುರುವಾರ ರಾತ್ರಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.ಈಶಾನ್ಯ ಭಾರತದ ಮೇಲೆ ಚಂಡ ಮಾರುತ ಅಪ್ಪಳಿಸಲಿದ್ದು, ಗುಡುಗು ಸಹಿತ ಮಳೆಯಾಗಲಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಂಡಮಾನ್‌ ಬಳಿ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಆದರೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶವೂ ಏರಿಕೆಯಾಗಿದೆ.

ಬೆಂಗಳೂರು ನಗರ, ಬೆಳ್ತಗಂಡಿ, ಧರ್ಮಸ್ಥಳ, ಉಪ್ಪಿನಂಗಡಿ, ಮಡಿಕೇರಿ, ಬೇಲೂರು, ಅರಕಲಗೂಡು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದೆ.

ಮೂರು ದಿನ ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಮಳೆಯಾಗಲಿದೆ. ಮೇ ತಿಂಗಳ ಆರಂಭದಲ್ಲಿ ಬಿಸಿಲ ಧಗೆ ಜೋರಾಗಿದೆ.

ಬುಧವಾರ ಕಲಬುರಗಿಯಲ್ಲಿ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ವಿಜಯಪುರದಲ್ಲಿ 41, ರಾಯಚೂರಿನಲ್ಲಿ 40, ಬೀದರ್‌ನಲ್ಲಿಯೂ 40 ಡಿಗ್ರಿ ತಾಪಮಾನ ದಾಖಲಾಗಿದೆ.

ಕೇರಳದಲ್ಲಿ ಗುಡುಗು ಸಹಿತ ಮಳೆ

ಶುಕ್ರವಾರ ಕೇರಳದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.ಹಾಗೆಯೇ ಅರುಣಾಚಲ ಪ್ರದೇಶ, ಮಣಿಪುರ, ಮಿಜೋರಾಂ, ತ್ರಿಪುರ, ಮೇಘಾಲಯ, ನಾಗಾಲ್ಯಾಂಡ್, ಪಶ್ಚಿಮ ಬಂಗಾಳದಲ್ಲೂ ಮಳೆಯಾಗಲಿದೆ.

ತಮಿಳುನಾಡು, ತೆಲಂಗಾಣದಲ್ಲೂ ಮಳೆ

ತಮಿಳುನಾಡು, ಕರ್ನಾಟಕದ ಕರಾವಳಿ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಜಾರ್ಖಂಡ್, ಬಿಹಾರ, ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್‌ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ
ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್

ಹರ್ಯಾಣಾ, ಹಿಮಾಚಲಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ, ಚತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ.

ಕರ್ನಾಟಕದಲ್ಲಿ ಮೂರು ದಿನ ಮಳೆ

ಮೇ 7, 8 ಮತ್ತು 11ರಂದು ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಶಿವಮೊಗ್ಗ,ಉಡುಪಿ,ಮಂಗಳೂರು,ಉತ್ತರ ಕನ್ನಡ ಬೆಂಗಳೂರು ನಗರದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
Leave a Reply

Your email address will not be published. Required fields are marked *