ಸಹಕಾರ ಗ್ರಾಹಕರ ಮಹಾಮಂಡಳದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.

457

ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತದ ವಿವಿಧ 43 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳು: 43

ಮೀಸಲಾತಿ ವಿವರ :-

ರಾಜ್ಯಮಟ್ಟದ ಉಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳೆಂದು ವಿಭಾಗ ಮಾಡಿ ಅದರಲ್ಲಿ ಸಾಮಾನ್ಯವರ್ಗ, ಎಸ್ಸಿ, ಎಸ್ಟಿ, ಪ್ರವರ್ಗ 1, 2ಎ, 2ಬಿ, 3ಎ, 3ಬಿ, ಮಹಿಳಾ ಅಭ್ಯರ್ಥಿ, ಗ್ರಾಮೀಣ, ಅಂಗವಿಕಲ, ಇತರೆ ಅಭ್ಯರ್ಥಿಗಳೆಂದು ಮೀಸಲಾತಿ ನಿಗದಿಪಡಿಸಲಾಗಿದೆ.

ಮಹಿಳೆ/ ಗ್ರಾಮೀಣ ಅಭ್ಯರ್ಥಿಗಳಿಗೆ ಮೀಸಲಿರುವ ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳು ಲಭ್ಯವಾಗದಿದ್ದರೆ, ಆಯಾ ವರ್ಗಕ್ಕೆ ಸೇರಿದ ಇತರೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು.

ಖಾಲಿ ಇರುವ ಹುದ್ದೆ ವಿವರ

ಲೆಕ್ಕಿಗರು – 5

ಬಿಕಾಂ/ ಸಹಕಾರ/ ಮ್ಯಾನೇಜ್‍ಮೆಂಟ್‍ನಲ್ಲಿ ಪದವೀಧರರಾಗಿದ್ದು, ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನದ ಜತೆ ಟ್ಯಾಲಿ ಕೋರ್ಸ್ ತಿಳಿದಿರಬೇಕು. ಮಾಸಿಕ 19,000- 34,500 ರೂ. ವೇತನ ಇದೆ.

ಪ್ರಥಮ ದರ್ಜೆ ಗುಮಾಸ್ತ – 10

ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿದ್ದು, ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು. ಮಾಸಿಕ 13,600- 26,000 ರೂ. ವೇತನ ಇದೆ.

ವಿಕ್ರಯ ಸಹಾಯಕರು – 10

ದ್ವಿತೀಯ ಪಿಯುಸಿ ಉತ್ತೀರ್ಣರಾಗಿದ್ದು, ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಅವಶ್ಯ. ಮಾಸಿಕ 12,500- 24,000 ರೂ. ವೇತನ ನೀಡಲಾಗುವುದು.

ಬೆರಳಚ್ಚುಗಾರ – 8

ದ್ವಿತೀಯ ಪಿಯುಸಿ ಅಥವಾ ಕಮರ್ಷಿಯಲ್ ಪ್ರಾಕ್ಟೀಸ್‍ನಲ್ಲಿ 3 ವರ್ಷದ ಡಿಪ್ಲೋಮಾ ಉತ್ತೀರ್ಣರಾಗುವುದರ ಜತೆಗೆ ಸೀನಿಯರ್ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಉತ್ತೀರ್ಣರಾಗಿರಬೇಕು. ಮಾಸಿಕ 12,500-24,000 ರೂ. ವೇತನ ಇದೆ.

ಜವಾನರು – 10

ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಮಾಸಿಕ 10,400- 16,400 ರೂ. ವೇತನ ನೀಡಲಾಗುವುದು.

ಬ್ಯಾಕ್‍ಲಾಗ್ ಹುದ್ದೆ

ಕಿರಿಯ ಫಾರ್ಮಾಸಿಸ್ಟ್ – 2

ಡಿಪ್ಲೋಮಾ ಇನ್ ಫಾರ್ಮಾಸಿಸ್ಟ್ ಮಾಡಿದ್ದು, ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಅವಶ್ಯ. ಮಾಸಿಕ 14,550-26,700 ರೂ. ವೇತನ ಇದೆ.

ವಯೋಮಿತಿ: ಅರ್ಜಿ ಸಲ್ಲಿಕೆ ಕೊನೇ ದಿನಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ, ಗರಿಷ್ಠ ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ 2ಎ, 2ಬಿ, 3ಎ, 3ಬಿಗೆ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1ಕ್ಕೆ 40 ವರ್ಷ. ಮಾಜಿ ಸೈನಿಕರಿಗೆ, ಅಂಗವಿಕಲರಿಗೆ, ವಿಧವೆಯರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿಶುಲ್ಕ

ಎಸ್ಸಿ, ಎಸ್ಟಿ, ಪ್ರವರ್ಗ 1ಕ್ಕೆ ಅಂಚೆ ಕಚೇರಿ ಶುಲ್ಕ ಸೇರಿ 530 ರೂ., ಇತರ ಅಭ್ಯರ್ಥಿಗಳಿಗೆ ಅಂಚೆ ಕಚೇರಿ ಶುಲ್ಕ ಸೇರಿ 1030 ರೂ.

ಆಯ್ಕೆ ಪ್ರಕ್ರಿಯೆ ಹೀಗಿದೆ.

ಅಭ್ಯರ್ಥಿಗಳ ಶೈಕ್ಷಣಿಕ ಅಂಕ, ಅಗತ್ಯ ದಾಖಲಾತಿಗಳ ಆಧಾರದ ಮೇಲೆ ಶಾರ್ಟ್‍ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಆಹ್ವಾನಿಸಲಾಗುವುದು. ಒಂದು ಹುದ್ದೆಗೆ 1:5 ರ ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೇ ದಿನ: 5.4.2021

: https://bit.ly/38cmUOI

ಮಾಹಿತಿಗೆ: http://www.recruitapp.in/ksccf2021
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ