ಏಪ್ರಿಲ್ 30ರ ವರೆಗೆ ಕರ್ನಾಟಕದಲ್ಲಿ ಲಾಕ್ ಡೌನ್ ವಿಸ್ತರಣೆ.

691

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಿಸುವ ಸಂಬಂಧ ಏಪ್ರಿಲ್ 30ರವರೆಗೆ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಲಾಕ್‍ಡೌನ್ ಮುಂದುವರಿಯಲಿದೆ.

ದೇಶಾದ್ಯಂತ ಹೇರಲಾಗಿರುವ 21 ದಿನಗಳ ಲಾಕ್‍ಡೌನ್ ಏ.14ಕ್ಕೆ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಈ ಸಂದರ್ಭದಲ್ಲಿ ಲಾಕ್‍ಡೌನ್ ವಿಧಿಸಿದ ಪರಿಣಾಮ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ. ಹೀಗಾಗಿ ಏ.30ರವರೆಗೆ ಲಾಕ್‍ಡೌನ್ ವಿಸ್ತರಿಸಬೇಕೆಂದು ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮನವಿ ಮಾಡಿದ್ದರು.

ಮೋದಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಯಡಿಯೂರಪ್ಪ ಏ.30ರವರೆಗೆ ಲಾಕ್‍ಡೌನ್ ವಿಸ್ತರಿಸಲಾಗಿದೆ ಎಂದು ಅಧಿಕೃತವಾಗಿ ತಿಳಿಸಿದರು.

ಇನ್ನೆರೆಡು ದಿನದಲ್ಲಿ ಲಾಕ್ ಡೌನ್ ಹೊಸ ಮಾರ್ಗ ಸೂಚಿ ಪ್ರಕಟ ಮಾಡಲಿದ್ದು ಕೃಷಿ,ಕೈಗಾರಿಕೆ,ಕಾರ್ಮಿಕರಿಗೆ ತೊಂದರೆಯಾಗದಂತೆ ಮಾರ್ಗಸೂಚಿ ಮಾಡುವುದಾಗಿ ತಿಳಿಸಿದ್ದಾರೆ.ಇನ್ನು ಲಾಕ್ ಡೌನ್ ವೇಳೆ ಸರ್ಕಾರಿ ಎಲ್ಲಾ ಕಚೇರಿಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ