add

ಗಡಿಯಲ್ಲಿ ಕಾಣೆಯಾದ ಕನ್ನಡ ಸಂಘಟನೆ! ಮೌನಕ್ಕೆ ಜಾರಿದ ಸಂಸದರು,ಶಾಸಕರು.

397

ಕನ್ನಡವಾಣಿ ಡೆಸ್ಕ್:- ಮಹಾರಾಷ್ಟ್ರದ ಸಿ.ಎಂ ಉದ್ಭವ್ ಠಾಕ್ರೆ ಕರ್ನಾಟಕ ಆಕ್ರಮಿತ ಮಹರಾಷ್ಟ್ರ ಎಂಬ ಟ್ವೇಟ್ ಹೇಳಿಕೆಗೆ ಕರ್ನಾಟಕದಾಧ್ಯಾಂತ ಅಕ್ರೋಶ ವ್ಯಕ್ತವಾಗುತ್ತಿದೆ.

ಆದ್ರೆ ಗಡಿ ಜಿಲ್ಲೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯ ಶಾಸಕರು ಹಾಗೂ ಸಂಸದರು ಮೌನಕ್ಕೆ ಜಾರಿದ್ದಾರೆ. ಇನ್ನು ಜಿಲ್ಲೆಯ ಕನ್ನಡ ಸಂಘಟನೆಗಳು ಸಹ ಮೌನವಾಗಿದ್ದು ಕೊನೆ ಪಕ್ಷ ಖಂಡಿಸುವ ಕೆಲಸ ಸಹ ಮಾಡಿಲ್ಲ.

ಈ ಹಿಂದೆ ಜಿಲ್ಲೆಯ ಕಾರವಾರ,ಜೋಯಿಡಾ ,ರಾಮನಗರ ಮಹರಾಷ್ಟ್ರಕ್ಕೆ ಸೇರಬೇಕು ಎಂಬ ಉದ್ದಟತನ ಮೆರೆದಿದ್ದ ಮಹಾರಾಷ್ಟ್ರದ ಮುಖ್ಯಮಂತ್ರಿ ಪುನಹ ಕನ್ನಡಿಗರನ್ನು ಕೆರಳಿಸಿದ್ದಾರೆ.

ಆದ್ರೆ ಗಡಿ ಭಾಗದಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಶಾಸಕರು ಸಂಸದರು ಮಾತ್ರ ಮೌನಕ್ಕೆ ಜಾರಿದ್ದಾರೆ. ಇನ್ನು ಇಂದು ಕಾರವಾರಕ್ಕೆ ಆಗಮಿಸಿದ ಸಂಸದ ಅನಂತಕುಮಾರ್ ಹೆಗಡೆ ಬಳಿ ಮಾಧ್ಯಮಗಳು ಪ್ರತಿಕ್ರಿಯೆ ಕೇಳಿದಾಗ ಧನ್ಯವಾದಗಳು ಎಂದು ಅಷ್ಟೇ ಉತ್ತರಿಸಿ ಜಾರಿಕೊಂಡರು.

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿದ್ದಾರೆ,ಇದು ಅವರ ಉದ್ಧಟತನದ ಪ್ರದರ್ಶನವಾಗಿದೆ,ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು, ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ.

ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ.ಇದನ್ನು ನಾನು ಖಂಡಿಸುತ್ತೇನೆ
ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ,ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ,ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ,ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಸಿ.ಎಂ .ಯಡಿಯೂರಪ್ಪನವರು ಟ್ವೀಟ್ ಮಾಡಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ