ಶಿರಸಿಯಲ್ಲಿ ರಾಜ್ಯದ ಕುರಿತು ಕೋಡಿಮಠಶ್ರೀ ಭವಿಷ್ಯ-ಶ್ರೀಗಳು ಹೇಳಿದ್ದೇನು?

2323

ಕಾರವಾರ :- ರಾಜ್ಯದಲ್ಲಿ ಸದ್ಯ ಎದ್ದಿರುವ ರಾಜಕೀಯ ವಿಪ್ಲವ ಸುಖಾಂತ್ಯ ಕಾಣಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ನೇರಲಕಟ್ಟೆ ಗ್ರಾಮದಲ್ಲಿರುವ ಭೂದೇವಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಮಾತನಾಡಿದ ಅವರು,ಬೇಟೆಗಾರನೊಬ್ಬನಿಂದ ತಪ್ಪಿಸಿಕೊಂಡ ಜಿಂಕೆ ಸನ್ಯಾಸಿಯೊಬ್ಬನ ಎದುರು ಹಾದು ಓಡಿಹೋಗಿತ್ತು. ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಬೇಟೆಗಾರ ಕೇಳಿದಾಗ ಸನ್ಯಾಸಿ ದ್ವಂದ್ವದಲ್ಲಿ ಸಿಲುಕಿದ್ದರು.

ಕೋಡಿಮಠದ ಶ್ರೀಗಳು ಹೇಳಿದ್ದೇನು? ವಿಡಿಯೊ ನೋಡಿ:-

ಜಿಂಕೆ ಓಡಿಹೋದ ದಿಕ್ಕು ಹೇಳಿದರೆ ಅದರ ಸಾವಿಗೆ ಕಾರಣವಾದಂತಾಗುತ್ತದೆ. ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಸನ್ಯಾಸಿಗಿತ್ತು. ಇದೇ ವಿಚಾರ ರಾಜಕೀಯದ ಬಗ್ಗೆ ಹೇಳಲು ತೊಡಕಾಗುತ್ತದೆ. ಆದರೆ ಸದ್ಯವೇ ಈ ಸ್ಥಿತಿ ಸುಖಾಂತ್ಯ ಕಾಣಲಿದೆ ಎಂದರು.

ಇನ್ನು ನವೆಂಬರ್‌ನಿಂದ ಸಂಕ್ರಾಂತಿ ನಡುವೆ ದೇಶ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದೆ. ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ. ಆಗಸ್ಟ್‌ ಮೂರನೇ ವಾರದಿಂದ ಕೋವಿಡ್ ಹಾವಳಿ ಹೆಚ್ಚಲಿದೆ. ರೋಗದಿಂದ ಜನರು ಸಾಯುವುದಿಲ್ಲ. ರೋಗದ ಭಯದಿಂದಲ್ಲೇ ಸಾಯುವವರ ಸಂಖ್ಯೆ ಹೆಚ್ಚಲಿದೆ.
ಜನವರಿ ವರೆಗೂ ರೋಗ ಭಾದೆ ಇರಲಿದೆ,ಜನ ಧೈರ್ಯ ಕಳೆದುಕೊಳ್ಳಬಾರದು. ಕುಂಭ ರಾಶಿಯಲ್ಲಿ ಗುರು ಬಂದಿದ್ದಾನೆ ಜಲಸ್ತಂಭನ ವಿದೆ,ಅನೇಕ ಸಾವು ನೋವುಗಳು ಆಗುವುದಿದೆ.ಮಳೆ, ಗಾಳಿ ಅಧಿಕವಾಗಲಿದೆ. ಕೆರೆಕಟ್ಟೆಗಳು ಭರ್ತಿಯಾಗಿ, ಜಲಪ್ರಳಯ ಸಂಭವಿಸಲಿದೆ. ಪಂಚಭೂತಗಳಿಂದಲೂ ಈ ವರ್ಷ ಅನಾಹುತ ಸಂಭವಿಸಲಿದೆ’ ಎಂದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ