ಕರಾವಳಿ ಮಳೆನಾಡು ಸೇರಿದಂತೆ ಇನ್ನು ನಾಲ್ಕೈದು ದಿನ ಗುಡುಗು ಸಹಿತ ಮಳೆ

572

ಬೆಂಗಳೂರು:-ರಾಜ್ಯದ ಹಲವು ಭಾಗದಲ್ಲಿ ಗುಡುಗು ಸಹಿತ ಮಳೆಯ ಯಾಗುವ ಕುರಿತು ರಾಜ್ಯ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.

ಹವಾಮಾನ ಇಲಾಖೆ ಮಾಹಿತಿಯಂತೆ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನಚ್ಚರಿಕೆ ನೀಡಿದೆ.

ಇಂದಿನುಂದ ಮಲೆನಾಡು ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಭಾಗದ ಉತ್ತರ ಕನ್ನಡ ಜಿಲ್ಲೆ ,ಉಡುಪಿ,ಮಂಗಳೂರು ಮತ್ತು ಬೆಳಗಾವಿ, ಧಾರವಾಡ, ಗದಗ, ಹಾವೇರಿ ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಆನೆಕಲ್ಲು ಮಳೆ

ಇನ್ನು ಏಪ್ರಿಲ್ 23 ರಿಂದ 26 ರವರೆಗೆ ಕರ್ನಾಟಕದ ಪ್ರಮುಖ ಭಾಗವಾದ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ