BREAKING NEWS
Search

ಉತ್ತರ ಕನ್ನಡ ಜಿಲ್ಲೆ ಸೇರಿ 16 ಜಿಲ್ಲೆಗಳು ಸೋಮವಾರದಿಂದ ಅನ್ ಲಾಕ್!

6199

ಬೆಂಗಳೂರು :- ಒಂದು ವಾರದಿಂದ ಶೇ.5 ಕ್ಕಿಂತ ಕಡಿಮೆ ಪಾಸಿಟಿವ್ ವಿರುವ ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗಿದ್ದು ಉಳಿದ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಯಲಿದೆ.

ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ಗದಗ, ರಾಯಚೂರು, ಕಲಬುರಗಿ, ಬೀದರ್, ಬೆಂಗಳೂರು, ಯಾದಗಿರಿ ಸೇರಿ 16 ಜಿಲ್ಲೆಗಳಲ್ಲಿ ಅನ್ಲಾಕ್ ಮಾಡಲಾಗಿದೆ.
ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ. ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಇಂದು ಮುಖ್ಯಮಂತ್ರಿಗಳು ಚರ್ಚಿಸಿ ಈ ಘೋಷಣೆ ಮಾಡಿದ್ದಾರೆ.

ಅನ್ ಲಾಕ್ ಜಿಲ್ಲೆಗಳು:-

ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಸಡಿಲಿಕೆಗಳನ್ನು ನೀಡಲಾಗಿದೆ.

ಯಾವೆಲ್ಲಾ ಸಡಿಲಿಕೆ?

• ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.

• ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.

• ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.

• ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.

• ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.

• ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.

• ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
• ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

• ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.

• ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯಲಿದೆ.

ರಾಜ್ಯವ್ಯಾಪಿ ಅನ್ವಯವಾಗುವಂತೆ ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.

• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

• ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಇಂದಿನ ತಾಲೂಕುವಾರು ಕರೋನಾ ಪಾಸಿಟಿವ್ ವಿವರ ಈ ಕೆಳಗಿನಂತಿದೆ:-

ಶಿವಮೊಗ್ಗ ಜಿಲ್ಲೆಯ ಇಂದಿನ ಕರೋನಾ ಪಾಸಿಟಿವ್ ವಿವರ ಈ ಕೆಳಗಿನಂತಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!