ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವುಕಡೆ ಮಾ.30ರ ವರೆಗೆ ಮಳೆ!

725

ಬೆಂಗಳೂರು :- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಹವಾಮಾನ ವೈಪರಿತ್ಯ ಉಂಟಾಗಿದ್ದು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇಂದಿನಿಂದ ಮಾ.30 ರ ತನಕ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿಯ ದಕ್ಚಿಣ ಕನ್ನಡ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ,ಹಾಸನ, ಕೊಡಗು, ಮೈಸೂರು ಹಾಗೂ ರಾಮನಗರದಲ್ಲಿ ಮಾರ್ಚ್ 26 ರಿಂದ ಮಾರ್ಚ್ 30 ರವರೆಗೆ ಮಳೆಯಾಗಲಿದೆ.

ಇದಲ್ಲದೇ ಬೆಳಗಾವಿ ಭಾಗದಲ್ಲೂ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಸೂಚನೆ ನೀಡಿದ್ದು ಹಲವು ಕಡೆ ತುಂತುರು ಮಳೆಯಾದರೆ, ಹಲವು ಭಾಗದಲ್ಲಿ ಗುಡುಗು ,ಗಾಳಿ ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ