ಗುರುವನ್ನು ಸೋಲಿಸಿದ ಶಿಷ್ಯ-15 ವರ್ಷದ ನಂತರ ಜಿಲ್ಲಾ ಸಹಕಾರ ಮೀನುಮಾರಾಟ ಒಕ್ಕೂಟಕ್ಕೆ ರಾಜು ತಾಂಡೇಲರಿಗೆ ಒಲಿದ ಕಿರೀಟ!

318

ಕಾರವಾರ: ಜಿಲ್ಲೆಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಜಿಲ್ಲಾ ಸಹಕಾರ ಮೀನು ಮಾರಾಟ ಒಕ್ಕೂಟದ ಚುನಾವಣೆಯಲ್ಲಿ ಮೀನುಗಾರ ಮುಖಂಡ ರಾಜು ತಾಂಡೇಲ ಅವರ ಬಣ ಗೆಲುವು ಸಾಧಿಸಿದೆ. ಈ ಮೂಲಕ 15 ವರ್ಷಗಳ ಬಳಿಕ ಒಕ್ಕೂಟದಲ್ಲಿ ಹೊಸ ಗಾಳಿ ಬೀಸಿದೆ.

15 ನಿರ್ದೇಶಕ ಸ್ಥಾನಗಳಿದ್ದು, ಆರರಲ್ಲಿ ಈಗಾಗಲೇ ಅವಿರೋಧ ಆಯ್ಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡದ ಒಂದು ಸ್ಥಾನ, ‘ಕ’ ವರ್ಗದ ಹಿಂದುಳಿದ ‘ಬ’ ವರ್ಗದ ಒಂದು ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಗಿಲ್ಲ. ಹಾಗಾಗಿ ಏಳು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿತ್ತು.

‘ಕ’ ವರ್ಗದ ಸಾಮಾನ್ಯ ಮತದಾರರ ಕ್ಷೇತ್ರದ ಮೂರು ಸ್ಥಾನಗಳಿಗೆ ಆರು ಮಂದಿ ಸ್ಪರ್ಧಿಸಿದ್ದರು. ಅವರಲ್ಲಿ ಪ್ರಸ್ತುತ ಅಧ್ಯಕ್ಷರಾಗಿರುವ ಗಣಪತಿ ಮಾಂಗ್ರೆ ಮತ್ತು ಚಿತ್ತಾಕುಲಾ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷ ರಾಜು ತಾಂಡೇಲ ನಡುವೆ ಭಾರಿ ಪೈಪೋಟಿ ನಡೆದಿತ್ತು.

ಒಕ್ಕೂಟಕ್ಕೆ ಆಯ್ಕೆಯಾದವರ ಹೆಸರು ಈ ಕೆಳಗಿನಂತಿದೆ.

‘ಕ’ ವರ್ಗದ ಸಾಮಾನ್ಯ ವಿಭಾಗದಿಂದ ಚಿತ್ತಾಕುಲಾ ಸೀಬರ್ಡ್ ಕಾಲೊನಿಯ ರಾಜು ತಾಂಡೇಲ, ಬಿಣಗಾದ ವೆಂಕಟೇಶ ಈರಾ ಹರಿಕಂತ್ರ, ಕುಮಟಾದ ಬೀರಪ್ಪ ಈರಾ ಹರಿಕಂತ್ರ ಗೆಲುವು ಸಾಧಿಸಿದ್ದಾರೆ. ‘ಕ’ ವರ್ಗದ ಹಿಂದುಳಿದ ವರ್ಗ ‘ಅ’ ವಿಭಾಗದಿಂದ ಚಿತ್ತಾಕುಲಾದ ಸುಧಾಕರ ಚಾರಾ ಹರಿಕಂತ್ರ ಆಯ್ಕೆಯಾಗಿದ್ದಾರೆ.

ಕಾರವಾರ ತಾಲ್ಲೂಕಿನ ‘ಬ’ ವರ್ಗದ ಪ್ರತಿನಿಧಿಗಳಾಗಿ ದಿಲೀಪ ಹರಿಶ್ಚಂದ್ರ ಚಂಡೇಕರ್, ಶ್ರೀಧರ ಮಹಾಬಲೇಶ್ವರ ಹರಿಕಂತ್ರ ಹಾಗೂ ಕುಮಟಾ ತಾಲ್ಲೂಕಿನ ‘ಬ’ ವರ್ಗದ ಪ್ರತಿನಿಧಿಯಾಗಿ ಮಹೇಶ ನಾರಾಯಣ ಮೂಡಂಗಿ ಜಯ ಸಾಧಿಸಿದ್ದಾರೆ.

ಅವಿರೋಧ ಆಯ್ಕೆಯಾದವರ ಮಾಹಿತಿ ಈ ಕೆಳಗಿನಂತಿದೆ:-

‘ಕ’ ವರ್ಗದ ಪರಿಶಿಷ್ಟ ಜಾತಿ ಕ್ಷೇತ್ರದಿಂದ ಭಟ್ಕಳ ಬೆಳ್ವೆಯ ದಿವಾಕರ ದಾಸಿ ಮೊಗೇರ, ‘ಕ’ ವರ್ಗದ ಮಹಿಳಾ ಕ್ಷೇತ್ರದಿಂದ ಕಾರವಾರದ ಸವಿತಾ ನಿತಿನ್ ಗಾಂವ್ಕರ್ ಮತ್ತು ಆಶಾ ಶ್ರೀಧರ ಹರಿಕಂತ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

‘ಬ’ ವರ್ಗದ ಮೀನುಗಾರ ಸಹಕಾರ ಸಂಘದ ಮತದಾರರ ಕ್ಷೇತ್ರದಿಂದ ಅಳ್ವೆಕೋಡಿಯ ವಿಠ್ಠಲ ಶನಿಯಾರ ದೈಮನೆ, ಹೊನ್ನಾವರ ‘ಬ’ ವರ್ಗದ ಮೀನುಗಾರ ಸಹಕಾರ ಕ್ಷೇತ್ರದಿಂದ ಹೊನ್ನಾವರ ತಾಲ್ಲೂಕಿನ ಮಂಕಿಯ ಉಮೇಶ ಅಣ್ಣಪ್ಪ ಖಾರ್ವಿ, ಅಂಕೋಲಾ ‘ಬ’ ವರ್ಗದ ಮೀನುಗಾರ ಸಹಕಾರ ಕ್ಷೇತ್ರದಿಂದ ರಾಜು ತಿಮ್ಮಣ್ಣ ಹರಿಕಂತ್ರ ಆಯ್ಕೆಯಾಗಿದ್ದಾರೆ.




Leave a Reply

Your email address will not be published. Required fields are marked *