BREAKING NEWS
Search

ರಾತ್ರಿವೇಳೆ ಕಾರವಾರಕ್ಕೆ ದಿಡೀರ್ ಬೇಟಿಕೊಟ್ಟ ಅಮಿತಾ ಬಚ್ಚನ್ ,ಸುದೀಪ್ ,ಪುನೀತ್ ರಾಜ್ ಕುಮಾರ್ -ಸಮೋಸ ನೀಡಿ ಸ್ವಾಗತಿಸಿಸ ಸರ್ವರ್ ರಾಮ!

1244

ಕಾರವಾರ :- ಗಡಿ ನಾಡಿನ ಮೇಲೆ ಅದೇನು ಅಭಿಮಾನವೂ ಗೊತ್ತಿಲ್ಲ .ರಾತ್ರೋ ರಾತ್ರಿ ನಟ ಸುದೀಪ್ ,ಅಮಿತಾಬ್ ಬಚ್ಚನ್ ,ಪುನೀತ್ ರಾಜ್ ಕುಮಾರ್ ಕಾರವಾರದ ನಗರದ ಮಾರುತಿ ಗಲ್ಲಿಯ ಬೀದಿಯಲ್ಲಿ ಬಂದು ನಿಂತಿದ್ದರು.

ಇವರನ್ನು ನೋಡಲು ಸಾವಿರಾರು ಜನರು ಮುಗಿಬಿದ್ದು ಆನಂದಿಸಿ ಇವರ ಜೊತೆ ಸೆಲ್ಫಿ ತಗೆದುಕೊಂಡರು.ಅರೇ ಒಂದೊಂದು ದಿಕ್ಕಿನಲ್ಲಿರುವ ಈ ಗಣ್ಯರು ಒಟ್ಟಿಗೆ ಕಾರವಾರದಲ್ಲಿ ಬಂದಿದ್ದು ಏಕೆ ಅಂತೀರಾ? ಕನ್ಫ್ಯೂಸ್ ಆಗಬೇಡಿ ಇಲ್ಲಿದೆ ವಿಶೇಷ.

ರಂಗೋಲಿ ಜಾತ್ರೆ ವಿಡಿಯೋ ನೋಡಿ:-

ಪ್ರತಿವರ್ಷ ಡಿಸೆಂಬರ್ ತಿಂಗಳ ಮಧ್ಯಭಾಗದಲ್ಲಿ ಕಾರವಾರ ನಗರದ ಮಾರುತಿ ದೇವಸ್ಥಾನದ ಜಾತ್ರೋತ್ಸವ ನಡೆಯುತ್ತದೆ. ಈ ಜಾತ್ರೋತ್ಸವವು ರಂಗೋಲಿ ಜಾತ್ರೆ ಎಂದೇ ಪ್ರಸಿದ್ದಿ ಪಡೆದಿದೆ.

ಕಾರವಾರ ನಗರದಲ್ಲಿಯೇ ಈ ಜಾತ್ರೆ ವಿಶೇಷ ಮಹತ್ವ ಹೊಂದಿದ್ದು ಜಾತ್ರೆಯ ದಿನ ರಾತ್ರಿ ದೇವರ ಪಲ್ಲಕ್ಕಿ ಮಾರುತಿ ಗಲ್ಲಿ ಹಾಗೂ ಬ್ರಾಹ್ಮಣ ಗಲ್ಲಿಗಳಲ್ಲಿ ಪ್ರದಕ್ಷಿಣೆ ಹಾಕುತ್ತದೆ.

ಈ ವೇಳೆ ತಳಿರು ತೋರಣ ಹಾಗು ರಂಗೋಲಿ ಬಿಡಿಸಿ ಅನಾದಿಕಾಲದಿಂದಲೂ ದೇವರನ್ನು ಬರಮಾಡಿಕೊಳ್ಳುವುದು ಸಾಮಾನ್ಯ ಆದರೇ ಇದರ ಜೊತೆಗೆ ಪ್ರತಿ ಮನೆಯ ಮುಂದೆಯೇ ಆಂಜನೇಯನ ಸೇವೆ ರೂಪದಲ್ಲಿ ಒಬ್ಬರಿಗಿಂತ ಒಬ್ಬರು ವಿಶೇಷ ರಂಗೋಲಿ ಬಿಡಿಸುವ ಸಂಪ್ರದಾಯ ಬೆಳೆದುಕೊಂಡು ಬಂದಿದೆ.

ಹೀಗೆ ಬೆಳೆದುಕೊಂಡು ಬಂದ ಸಂಪ್ರದಾಯವನ್ನು ಉಳಿಸಿಕೊಳ್ಳಲು ದೇವಸ್ಥಾನದ ಆಡಳಿತ ವರ್ಗವೇ ರಂಗೋಲಿ ಸ್ಪರ್ದೆಯನ್ನಿಟ್ಟಿತು. ರಂಗೋಲಿ ಹಾಕುವುದು ಸ್ಪರ್ದೆಯಲ್ಲಿ ಗೆಲ್ಲುವುದು ಆಂಜನೇಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ಇರುವ ಗಲ್ಲಿಯ ಜನರ ಪ್ರತಿಷ್ಟೆಯಾಗಿ ಬದಲಾಯಿತು.

ಸಾಮಾಜಿಕ ಕಳಕಳಿಯನ್ನು ಬಿಂಬಿಸುತ್ತೆ ರಂಗೋಲಿ
ಕಾರವಾರದ ಮಾರುತಿ ಗಲ್ಲಿಯಲ್ಲಿ ರಂಗೋಲಿ ನೋಡುವುದೇ ಒಂದು ಹಬ್ಬದ ಸಂಭ್ರಮ.ಸಂಪ್ರದಾಯಿಕ ರಂಗೋಲಿ ಜೊತೆ ತಮಗೆ ಇಷ್ಟವಾದ ಚಲನ ಚಿತ್ರ ನಟ,ರಾಜಕಾರಣಿಗಳ ಚಿತ್ರ ಬಿಡಿಸಿದರೆ,ಕೆಲವರು ಸಾಮಾಜಿಕ ಕಳಕಳಿ ಬಿಂಬವಿರುವ ಚಿತ್ರಗಳನ್ನು ಬಿಡಿಸುತ್ತಾರೆ,ಜೊತೆಗೆ ತಮಗೆ ಇಷ್ಟವಾದ ಜನರು ಕೂಡ ಈ ಜಾತ್ರೆಯ ದಿನ ಈ ಬೀದಿಯಲ್ಲಿ ರಂಗೋಲಿಯಲ್ಲಿ ಮೂಡುತ್ತಾರೆ.ಇನ್ನು ನರೆಯಿಂದ ಇಡೀ ಜಿಲ್ಲೆ ತೊಂದರೆ ಅನುಭವಿಸಿದ ಕ್ಷಣವನ್ನು ರಂಗೋಲಿಯಲ್ಲಿ ಬಿಂಬಿತವಾಗಿತ್ತು.

ಕಾರವಾರದ ಹೋಟಲ್ ನಲ್ಲಿ ಸರ್ವರ್ ಕೆಲಸಗಾರ ರಾಮ ರಂಗೋಲಿಯಲ್ಲಿ

ಕಾರವಾರದ ಉಡುಪಿ ಹೋಟಲ್ ಒಂದರಲ್ಲಿ 40 ವರ್ಷಗಳಿಂದ ಸರ್ವರ್ ಆಗಿ ಕೆಲಸ ಮಾಡುತ್ತಿರುವ ರಾಮು ಎಂಬುವವರ ನಿಸ್ವಾರ್ಥ ಸೇವೆಯನ್ನು ನೋಡಿದ ಕಾರವಾರ ನಗರದ ಮಾರುತಿ ಗಲ್ಲಿಯ ವಸಂತ್ ವಾಡ್ಕರ್ ರವರು ಅವರ ಭಾವಚಿತ್ರವನ್ನು ರಂಗೋಲಿಯಲ್ಲಿ ಮೂಡಿಸುವ ಮೂಲಕ ಅವರ ಸೇವೆಯನ್ನು ಸ್ಮರಿಸಿದ್ದಾರೆ. ಅಂದ ಮಾತ್ರಕ್ಕೆ ವಾಡ್ಕರ್ ಹೋಟಲ್ ಮಾಲೀಕರಲ್ಲ. ಈ ಹೋಟಲ್ ಗೆ ಗ್ರಾಹಕರು.ಆದರೂ ಸರ್ವರ್ ಒಬ್ಬರ ನಿಸ್ವಾರ್ಥ ಸೇವೆಯನ್ನು ಇಲ್ಲಿ ಸ್ಮರಿಸಿದ್ದು ಎಲ್ಲರ ಮೆಚ್ಚುಗೆಗೆ ಕಾರಣವಾಗುವ ಜೊತೆಗೆ ಸರ್ವರ್ ರಾಮು ಸೆಲಬ್ರೆಟಿಯಾದರು.

ಈ ಜಾತ್ರೆಯು ರಾತ್ರಿಯಿಂದ ಮುಂಜಾನೆ ವರೆಗೆ ನಡೆಯುತ್ತದೆ‌. ಈ ಬಾರಿ ದುಬಾರಿಯಾದ ಈರುಳ್ಳಿಯಿಂದ ಮಾಡಿದ ಕಲಾಕೃತಿ,ಧಾನ್ಯ ಕಲಾಕೃತಿ,ಹೂವುಗಳ ರಂಗೋಲಿ ಚಿತ್ರಗಳು ಎಲ್ಲರ ಗಮನ ಸೆಳೆದರೆ,ಯಕ್ಷಗಾನ ,ಸಿನಿಮಾ ನಟರ ರಂಗೋಲಿ ಚಿತ್ರಗಳು ಕಲಾವಿದನ ಕೈನಲ್ಲಿ ಅರಳಿ ಎದ್ದು ಬಂದಂತೆ ಭಾಸವಾಗುತಿತ್ತು.


ಇನ್ನು ಜಾತ್ರೆ ನೋಡಲು ಕೇವಲ ಕಾರವಾರಿಗರು ಮಾತ್ರ ಇರದೇ ನೆರೆಯ ಗೋವಾ,ಮಹರಾಷ್ಟ್ರ,ರಾಜಸ್ತಾನ್ ನಿಂದ ಸಹ ಇಲ್ಲಿಗೆ ಬಂದು ಈ ವಿಶೇಷ ರಂಗೋಲಿ ಜಾತ್ರೆಯನ್ನು ನೋಡಿ ಕಣ್ತುಂಬಿಕೊಂಡರು.




Leave a Reply

Your email address will not be published. Required fields are marked *