BREAKING NEWS
Search

ಎಲ್ಲಿ ವಿರೋಧ ಕಂಡುಬರುತ್ತೋ ಅಲ್ಲಿಯೇ ಹೊಸಕಿ ಹಾಕಬೇಕು-ಮೀನುಗಾರರ ವಿರುದ್ಧ ಕಿಡಿ ಕಾರಿದ ಅನಂತಕುಮಾರ್ ಹೆಗಡೆ!

975

ಕಾರವಾರ: ಜಿಲ್ಲೆಗೆ ವ್ಯಾಪಾರ-ವಹಿವಾಟು ಬರಬೇಕು, ಅಭಿವೃದ್ಧಿಯಾಗಬೇಕು ಎಲ್ಲಿ ವಿರೋಧ ಕಂಡುಬರುತ್ತೋ ಅಲ್ಲಿಯೇ ಹೊಸಕಿ ಹಾಕಬೇಕು ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಕಾರವಾರದಲ್ಲಿ ಕಳೆದ ನಾಲ್ಕು ದಿನದಿಂದ ನಡೆಯುತ್ತಿರುವ ಸಾಗರಮಾಲಾ ಯೋಜನೆ ವಿರೋಧಿಸಿ ಹೋರಾಟ ಮಾಡುತ್ತಿರುವ ಮೀನುಗಾರರ ವಿರುದ್ಧ ಕಿಡಿಕಾರಿದ್ದಾರೆ.

ಕುಮಟಾದಲ್ಲಿ ನಡೆದ ಪಕ್ಷದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಅನಂತಕುಮಾರ ಹೆಗಡೆ ಜನರಿಗೆ, ಊರಿಗೆ ಬೇಕಾಗಿರುವುದು ಅಭಿವೃದ್ಧಿ, ರಾಜಕಾರಣಿಗಳಿಗಲ್ಲ.ನಮ್ಮ ಮುಂದಿನ ತಲೆಮಾರಿಗೋಸ್ಕರ ಅಭಿವೃದ್ಧಿ ಬೇಕಾಗಿದೆ,
ಪರ್ಮನೆಂಟ್ ಖುರ್ಚಿ ಮೇಲೆ ಕುಳಿತುಕೊಳ್ಳಲು ನಾನು ಖಂಡಿತ ಬಂದಿಲ್ಲ.ಆದ್ರೆ ಯಾವ ಹೆಜ್ಜೆ ಇಟ್ಟಿದ್ದೀನೋ ಅದನ್ನ ಮಾಡಿಯೇ ಹೋಗ್ತೇನೆ.
ಮಂಗಳೂರಿನಲ್ಲಿ, ಗೋವಾದಲ್ಲಿ ಬಂದರುಗಳು ಅಭಿವೃದ್ಧಿಯಾಗಿವೆ.ಅಲ್ಲಿನ ಮೀನುಗಾರರ ಬದುಕು ಹಾಳಾಗಿ ಹೋಗಿದೆಯಾ? ಎಂದು ಕಿಡಿ ಕಾರಿದ್ದಾರೆ.

ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದೇನು ? ವಿಡಿಯೋ ನೋಡಿ:-

ಸಾಗರಮಾಲಾ ಯೋಜನೆ ವಿರೋಧಿಸಿ ಕಾರವಾರದಲ್ಲಿ ಮೀನುಗಾರರು ಪ್ರತಿಭಟನೆ ನಡೆಸುತಿದ್ದು ಕಾಮಗಾರಿ ನಿಲ್ಲಿಸುವಂತೆ ಕಾರವಾರ ತಾಲೂಕು ಬಂದ್ ಮಾಡಿದ್ದು ನಿರಂತರ ಪ್ರತಿಭಟನೆ ಮಾಡುತಿದ್ದಾರೆ.

ಇದಲ್ಲದೇ ಸಂಸದ ಅನಂತಕುಮಾರ್ ಹೆಗಡೆ ಹಾಗೂ ಕಾರವಾರದ ಶಾಸಕಿ ರೂಪಾಲಿ ನಾಯ್ಕ ಭಾವಚಿತ್ರಕ್ಕೆ ಸಗಣಿ ಬಳಿದು ಚಪ್ಪಲಿ ಹಾರ ಹಾಕುವ ಜೊತೆಗೆ ಅನಂತಕುಮಾರ್ ಭಾವಚಿತ್ರಕ್ಕೆ ಶಾಸಕಿ ರೂಪಾಲಿ ನಾಯ್ಕ ಮುಖ ಹಾಗೂ ಶಾಸಕಿ ರೂಪಾಲಿ ನಾಯ್ಕ ಮುಖಕ್ಕೆ ಅನಂತಕುಮಾರ್ ಹೆಗಡೆ ಭಾವ ಚಿತ್ರ ಅಂಟಿಸಿ ಪ್ರತಿಭಟನೆಯಲ್ಲಿ ಪ್ರದರ್ಶನ ಮಾಡಿದ್ದು ಬಿಜೆಪಿಗರಿಗೆ ಇರಿಸು ಮುರಿಸು ತಂದಿತ್ತು. ಇದರ ನಂತರ ಮೀನುಗಾರರ ಪರವಾಗಿದ್ದೇವೆ ಎಂದು ಕುದ್ದು ಶಾಸಕಿ ಪತ್ರಿಕಾ ಜಾಹಿರಾತು ಸಹ ನೀಡಿ ಮೀನುಗಾರರ ಕೊಪ ತಣ್ಣಗಾಗಿಸುವ ಪ್ರಯತ್ನ ಮಾಡಿದ್ದರು.

ಆದರೇ ಈಗ ಸಂಸದರ ಈ ಹೇಳಿಕೆ ಮೀನುಗಾರರಲ್ಲಿ ಮತ್ತಷ್ಟು ಕುಪಿತರಾಗುವಂತೆ ಮಾಡಿದೆ.




Leave a Reply

Your email address will not be published. Required fields are marked *