ಬೈಕ್ ಸವಾರರು ಹಾಗು ಸಹ ಸವಾರರಿಗೆ ಹೆಲ್ಮೆಟ್ ಕಡ್ಡಾಯ ತಪ್ಪಿದ್ರೆ ಏನು ಶಿಕ್ಷೆ ಗೊತ್ತಾ!

989

ಬೆಂಗಳೂರು, ಅ.19; ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಆದೇಶ ನೀಡಿದೆ. ಒಂದು ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ವಾಹನ ಪರವಾನಗಿ ರದ್ದುಗೊಳ್ಳಲಿದೆ.

ಮೋಟಾರು ವಾಹನ ಕಾಯ್ದೆಯಡಿ ಸಾರಿಗೆ ಇಲಾಖೆ ಆಯುಕ್ತರ ಕಚೇರಿ ಆದೇಶ ಹೊರಡಿಸಿದ್ದು, ಬೈಕ್ ಸವಾರ ಹಾಗೂ ಹಿಂಬದಿಯ ಸವಾರ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸದೇ ಇದ್ದರೆ 3 ತಿಂಗಳು ಕಾಲ ಲೈಸನ್ಸ್ ರದ್ದುಗೊಳಿಸಲಾಗುವುದು. ಅಲ್ಲದೇ ದಂಡವನ್ನು ವಿಧಿಸಲಾಗುವುದು ಎಂದು ತಿಳಿಸಿದೆ.

ಹಲವು ಬಾರಿ ಹೆಲ್ಮೆಟ್ ಕಡ್ಡಾಯಗೊಳಿಸಿದ್ದರೂ ಕೂಡ ವಾಹನಸವಾರರು ರಾಜಾರೋಷವಾಗಿ ಹೆಲ್ಮೆಟ್ ಧರಿಸದೇ ಬೈಕ್ ಓಡಿಸುತ್ತಿದ್ದರು. ಅಲ್ಲದೇ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಲೇ ಇದೆ. ಈ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಹೆಲ್ಮೆಟ್ ಕಡ್ಡಾಯಗೊಳಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ವರದಿ:-ಪ್ರದೀಪ್ ಜಿ.ಎಸ್
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ