ಕುಮಟಾದಲ್ಲಿ ಗಣೇಶ ವಿಸರ್ಜನೆ ವೇಳೆ ಎಡವಟ್ಟು- ಆಭರಣ ಸಮೇತ ವಿಸರ್ಜಿಸಿ ಪೇಚಿಗೆ ಸಿಕ್ಕ ಗ್ರಾಮಸ್ತರು.!

2348

ಕಾರವಾರ:- ಸಾರ್ವಜನಿಕ ಗಣಪತಿ ಯನ್ನು ವಿಸರ್ಜಿಸುವ ವೇಳೆ ಗಣೇಶ ಮೂರ್ತಿಗೆ ತೊಡಿಸಿದ್ದ ಚಿನ್ನದ ಉಂಗುರ ಹಾಗೂ ಬೆಳ್ಳಿ ಸರಪಳಿ ಸಮೇತದ ಆಭರಣಗಳನ್ನು ಗಣಪತಿಯೊಂದಿಗೆ ಕೆರೆಯಲ್ಲಿ ವಿಸರ್ಜಿಸಿ ಗ್ರಾಮಸ್ಥರು ಹಾಗೂ ಸಂಘಟಕರು ಪೇಚಿಗೆ ಸಿಲುಕಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮಳಲಿ ಗ್ರಾಪಂ ವ್ಯಾಪ್ತಿಯ ಗೋನರಹಳ್ಳಿಯಲ್ಲಿ ನಡೆದಿದೆ.

ಇಂದು ವಿದ್ಯುಕ್ತವಾಗಿ ಗಣಪತಿಗೆ ಪೂಜೆ ಸಲ್ಲಿಸಿ ಸಮೀಪದ ಕೆರೆಗೆ ತಂದ ಗೊನೆಹಳ್ಳಿ ಗ್ರಾಮಸ್ಥರು ದೇವರಿಗೆ ಹಾಕಿದ್ದ ಉಂಗುರ, ಬೆಳ್ಳಿ ಸರಪಳಿಯನ್ನು ತೆಗೆಯುವುದನ್ನು ಮರೆತಿದ್ದರು. ಈ ವೇಳೆ ಗಣಪತಿಯನ್ನು ಕೆರೆಯ ನಡುಭಾಗದಲ್ಲಿ ವಿಸರ್ಜಿಸಲಾಗಿತ್ತು. ನಂತರ ಮರಳಿ ಬಂದಾಗ ಗಣೇಶನಿಗೆ ಹಾಕಿದ್ದ ಆಭರಣಗಳು ಕಾಣದಾದಾಗ ತಾವು ಮಾಡಿದ ತಪ್ಪು ಅರಿವಾಗಿದೆ.

ಕೆಲವರು ನೀರಿನಲ್ಲಿ ಮುಳಗಿ ಹುಡುಕುವ ಪ್ರಯತ್ನ ಮಾಡಿದರೂ ಕೈ ಚಲ್ಲಿ ಕೂರುವಂತಾಯಿತು. ನಂತರ ದೇವರಭಾವಿ ಗ್ರಾಮದ ಯುವಕ ವಿನಯ್ ನಾಯಕ್ ಎಂಬುವವರು ಸ್ಕೂಬಾ ಡೈ ಗೆ ಬಳಸುವ ಪರಿಕರ ಬಳಸಿ ನೀರಿನಲ್ಲಿ ಮುಳಗಿ ಕೊನೆಗೂ ಗಣಪತಿಯೊಂದಿಗೆ ವಿಸರ್ಜಿಸಿದ ಆಭರಣಗಳನ್ನು ತೆಗೆದುಕೊಟ್ಟರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ