BREAKING NEWS
Search

ಕುಮಟಾ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ- ಸಂಚಾರ ಬಂದ್!ತಪ್ಪಿದ ಅನಾಹುತ

925

ಕಾರವಾರ :- ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ಹಂದಿಗೋಣ ಬಳಿ ನಡೆದಿದೆ.

ಮಂಗಳೂರಿನಿಂದ ಹುಬ್ಬಳ್ಳಿಗೆ ಹೊರಟಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು ಗ್ಯಾಸ್ ಟ್ಯಾಂಕರ್ ನಲ್ಲಿ ಗ್ಯಾಸ್ ಸೋರಿಕೆಯಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಯಾವುದೇ ಅನಾಹುತ ಸಂಭವಿಸದಂತೆ ಜಾಗೃತಿ ವಹಿಸಿದ್ದು ಮುಂಜಾಗೃತ ಕ್ರಮವಾಗಿ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದ್ದು ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ