ಕುಮಟಾ ಶಾಸಕ ದಿನಕರ್ ಶಟ್ಟಿ ಪತ್ರಕರ್ತರ ವಿರುದ್ಧ ಅವಹೇಳನಕಾರಿ ಹೇಳಿಕೆ-ಪತ್ರಕರ್ತರಿಂದ ಮುಖ್ಯಮಂತ್ರಿಗಳಿಗೆ ದೂರು

1036

ಶಿರಸಿ : – ಪತ್ರಕರ್ತರ ವಿರುದ್ಧ ಅವಹೇಳಕಾರಿ ಮಾತುಗಳನ್ನಾಡಿರುವ ಶಾಸಕ ದಿನಕರ ಶೆಟ್ಟಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಜಿಲ್ಲೆಯ ಪತ್ರಕರ್ತರ ವಿರುದ್ಧ ಮಾತನಾಡಿದ ಶಾಸಕ ದಿನಕರ ಶೆಟ್ಟಿಯವರ ಮೇಲೆ ಸೂಕ್ತ ಕ್ರಮ ಆಗಬೇಕು. ಈ ರೀತಿ ಇನ್ನು ಮುಂದೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಶಿರಸಿಯ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದರು.

ಕಳೆದ ಕೆಲ ದಿನಗಳ ಹಿಂದೆ ಕುಮಟಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ದಿನಕರ್ ಶೆಟ್ಟಿ, ಕುಮಟಾ ಹೊರತು ಪಡಿಸಿ ಜಿಲ್ಲೆಯ ಉಳಿದ ಪತ್ರಕರ್ತರು ಹಣವನ್ನು ತೆಗೆದುಕೊಳ್ಳುತ್ತಾರೆ ಎಂದು ಮಾತನಾಡಿದ್ದಾರೆ. ಇದು ಖಂಡನೀಯವಾಗಿದ್ದು, ಪತ್ರಕರ್ತರ ಆತ್ಮಾಭಿಮಾನಕ್ಕೆ ಮಾಡಿದ ಧಕ್ಕೆಯಾಗಿದೆ. ಆದ ಕಾರಣ ಇದರ ಬಗ್ಗೆ ಸೂಕ್ತ ಕ್ರಮ ಆಗಬೇಕು ಎಂದು ಸಂಘದಿಂದ ಆಗ್ರಹಿಸಿದರು.

ಇದೇ ವೇಳೆ ಬೆಂಗಳೂರಿನಲ್ಲಿ ಪತ್ರಕರ್ತರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಲಾಯಿತು. ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹ ವ್ಯಕ್ತವಾಯಿತು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ