BREAKING NEWS
Search

ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಪತ್ನಿಗೆ ಕರೋನಾ ಪಾಸಿಟಿವ್

630

ಕಾರವಾರ :- ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶಿವರಾಮ ಹೆಬ್ಬಾರ್ ಹಾಗೂ ಅವರ ಧರ್ಮಪತ್ನಿ ವನಜಾಕ್ಷಿ ಹೆಬ್ಬಾರ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಇಂದು ದೃಡಪಟ್ಟಿದೆ.

ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಸ್ಟೇಟಸ್ ಹಾಕಿರುವ ಅವರು ತನಗೆ ಹಾಗೂ ತಮ್ಮ ಪತ್ನಿಗೆ ಕೋವಿಡ್ ಸೋಂಕು ತಗುಲಿರುವ ಬಗ್ಗೆ ದೃಡಪಡಿಸಿದ್ದಾರೆ.

ನಿನ್ನೆ ದಿನ ಯಲ್ಲಾಪುರ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಅವರ ಇಂದು ಕೋವಿಡ್ ವರದಿಯಲ್ಲಿ ಇಬ್ಬರಿಗೂ ಸೋಂಕು ದೃಢಪಟ್ಟಿದೆ. ಕಳೆದ 2 ದಿನಗಳಿಂದ ಸಚಿವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಚಿವರು ಫೇಸ್ ಬುಕ್ ಮೂಲಕ ವಿನಂತಿಸಿದ್ದಾರೆ.

ಸದ್ಯ ಅವರಿಗೆ ಹೆಚ್ಚಿನ ಯಾವುದೇ ರೋಗ ಲಕ್ಷಣ ಕಂಡುಬಂದಿಲ್ಲ, ಸದ್ಯ ವೈದ್ಯರ ಸಲಹೆಯಂತೆ ಅವರು ಹೋಮ್ ಕ್ವಾರಂಟೈನ್ ಆಗಿದ್ದಾರೆ.

ಹೆಬ್ಬಾರ್ ಅವರು ಇಂದು ಜಿಲ್ಲೆಯ ಶಿರಸಿ ಸಿದ್ದಾಪುರ ಭಾಗದಲ್ಲಿ ಕಾರ್ಯಕ್ರಮಕ್ಕೆ ಭಾಗವಹಿಸಬೇಕಿತ್ತು.ಆದರೇ ಕೋವಿಡ್ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದ್ದು ಹೋಮ್ ಕ್ವಾರಂಟೈನ್ ನಲ್ಲಿ ಇದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ