ಶಿರಸಿ ಮತ್ತಿಘಟ್ಟದಲ್ಲಿ ಭೂಕುಸಿತಕ್ಕೆ ಒಂದು ಎಕರೆ ಅಡಿಕೆ ತೋಟ ನಾಶ!

976

ಶಿರಸಿ :-ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮತ್ತಿಘಟ್ಟದ ಕೆಳಗಿನಕೇರಿ ಗ್ರಾಮದಲ್ಲಿ ಇಂದು ದಿಡೀರ್ ಭೂ ಕುಸಿತವಾಗಿ ಜನರನ್ನು ಬೆಚ್ಚಿಬೀಳಿಸಿದೆ.

ಕಳೆದ ವರ್ಷದ ಭಾರಿ ಮಳೆಯಿಂದಾಗಿ ಇಲ್ಲಿನ ಗುಡ್ಡಭಾಗದಲ್ಲಿ ಭೂಮಿ ಬಿರುಕು ಬಿಟ್ಟಿದ್ದು, ಇಂದು ದಿಡೀರ್ ಕುಸಿತಕಂಡಿದೆ.

ಕುಸಿತದಿಂದಾಗಿ ಮಧುಸೂದನ್ ಹೆಗಡೆ ಎಂಬುವವರಿಗೆ ಸೇರಿದ ಒಂದು ಎಕರೆ ಅಡಿಕೆ ತೋಟ ಸಂಪೂರ್ಣ ನಾಶವಾಗಿದೆ.

ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲೆ ನಡೆಸಿದ್ದು, 10 ಲಕ್ಷಕ್ಕೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ